Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಈ ಬಾರಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ : ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

Facebook
Twitter
Telegram
WhatsApp

Kannada Rajyotsava celebrations in grand style this time: Kavita Mannikeri

ಈ ಬಾರಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ : ಕವಿತಾ ಮನ್ನಿಕೇರಿ

ಚಿತ್ರದುರ್ಗ(ಅ.19) : ಈ ಬಾರಿ ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ನ. 01 ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅದರನ್ವಯ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 01 ರಂದು ಜಿಲ್ಲಾ ಕೇಂದ್ರದಲ್ಲಿ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು.  ರಾಜ್ಯೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ 7.30 ಗಂಟೆಗೆ ಕನ್ನಡಾಂಬೆ ಭಾವಚಿತ್ರದ ಮೆರವಣಿಗೆಯು ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಲಿದೆ.

ಮೆರವಣಿಗೆಯಲ್ಲಿ ನಮ್ಮ ನಾಡು, ನುಡಿ, ಸಂಸ್ಕøತಿ ಬಿಂಬಿಸುವ ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಳ್ಳಲಿವೆ.  ಇದಕ್ಕೆ ಬೇಕಾದ ತಂಡಗಳನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ವ್ಯವಸ್ಥೆಗೊಳಿಸಬೇಕು.  ಇದರ ಜೊತೆಗೆ ಕನ್ನಡ ನಾಡಿನ ವಿಶೇಷತೆ ಬಿಂಬಿಸುವಂತಹ ಸ್ತಬ್ಧಚಿತ್ರಗಳು ಪಾಲ್ಗೊಳ್ಳಲಿದ್ದು, ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು, ಶಾಲಾ ಕಾಲೇಜುಗಳು ಸ್ತಬ್ಧಚಿತ್ರವನ್ನು ತಯಾರಿಸಲು ಆಹ್ವಾನಿಸಲಾಗಿದ್ದು, ಸ್ತಬ್ಧಚಿತ್ರದ ವಿಷಯ ಹಾಗೂ ಪ್ರಸ್ತುತಪಡಿಸುವಿಕೆಗೆ ಜಿಲ್ಲಾಡಳಿತದಿಂದ ಪೂರ್ವಾನುಮತಿ ಪಡೆದುಕೊಳ್ಳಬೇಕು.

ಮೆರವಣಿಗೆಯು ನೀಲಕಂಠೇಶ್ವರ ದೇವಸ್ಥಾನದಿಂದ ಹೊರಟು, ಪ್ರಮುಖ ರಸ್ತೆ ಮೂಲಕ ರಾಜ್ಯೋತ್ಸವ ಸಮಾರಂಭ ಜರುಗುವ ಪೊಲೀಸ್ ಕವಾಯತು ಮೈದಾನದವರೆಗೆ ಸಾಗಿ ಬರಲಿದೆ.  ಅಂದು ಬೆಳಿಗ್ಗೆ 09 ಗಂಟೆಗೆ ಪೊಲೀಸ್ ಕವಾಯತು ಮೈದಾನದಲ್ಲಿ ರಾಜ್ಯೋತ್ಸವ ಸಮಾರಂಭದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರಧ್ವಜಾರೋಹಣ ನೆರವೇರಲಿದ್ದು, ಶಿಷ್ಠಾಚಾರದನ್ವಯ ಎಲ್ಲ ಗಣ್ಯಮಾನ್ಯರನ್ನು ಆಹ್ವಾನಿಸಲಾಗುವುದು.  ಶಾಲಾ ಕಾಲೇಜು ಹಾಗೂ ಹಾಸ್ಟೆಲ್‍ಗಳ ವಿದ್ಯಾರ್ಥಿಗಳಿಂದ ಅಂದು ಬೆಳಿಗ್ಗೆ ಮೈದಾನದಲ್ಲಿ ಹಾಗೂ ಸಂಜೆ ನಗರದ ತ.ರಾ.ಸು. ರಂಗಮಂದಿರದಲ್ಲಿ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.  ಸಾಂಸ್ಕøತಿಕ ಕಾರ್ಯಕ್ರಮಗಳ ಆಯ್ಕೆ ಸಂಬಂಧ ಡಿಡಿಪಿಐ ಅವರು, ಕಾರ್ಯಕ್ರಮದ ವಿಷಯ ಹಾಗೂ ಪ್ರಸ್ತುತಪಡಿಸುವಿಕೆಯನ್ನು ಪೂರ್ವಭಾವಿಯಾಗಿ ಪರಿಶೀಲಿಸಿ ಬಳಿಕ  ಪ್ರದರ್ಶನಕ್ಕೆ ಅನುಮತಿ ನೀಡಬೇಕು ಎಂದು ಸೂಚನೆ ನೀಡಿದರು.

ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಆಚರಿಸಲು ಅನುವಾಗುವಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ, ಜಿ.ಪಂ. ಸಿಇಒ ನೇತೃತ್ವದಲ್ಲಿ ಹಣಕಾಸು ಸಮಿತಿ, ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಂಘಟನಾ ಮತ್ತು ವೇದಿಕೆ ಸಮಿತಿ ಹಾಗೂ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಸಮಿತಿಯನ್ನು ಇದೇ ಸಂದರ್ಭದಲ್ಲಿ ರಚಿಸಲಾಯಿತು.  ಆಯಾ ಸಮಿತಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಶ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೆ ಕನ್ನಡಪರ ಸಂಘ ಸಂಸ್ಥೆಗಳು ಕೂಡ ಸ್ತಬ್ಧಚಿತ್ರ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡು, ಆಚರಣೆಗೆ ಇನ್ನಷ್ಟು ಮೆರಗು ನೀಡಬೇಕು ಎಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣ, ಜಿ.ಪಂ. ಉಪಕಾರ್ಯದರ್ಶಿ ರಂಗಸ್ವಾಮಿ, ಉಪವಿಭಾಗಾಧಿಕಾರಿ ಚಂದ್ರಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್, ಡಿವೈಎಸ್‍ಪಿ ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ರಂಗಕರ್ಮಿ ಕೆ.ಪಿ. ಗಣೇಶಯ್ಯ, ವಿವಿಧ ಸಂಘ ಸಂಸ್ಥೆಗಳು, ಕನ್ನಡಪರ ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು ಭಾಗವಹಿಸಿದ್ದರು.  ಮಹತ್ವದ ಪೂರ್ವಭಾವಿ ಸಭೆಗೆ ಗೈರುಹಾಜರಾಗಿದ್ದ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಲ್ಲುಜ್ಜದೇ ನೀರು ಕುಡಿತೀರಾ..? ಡೋಂಟ್ ವರಿ ಅದರಿಂದಾನೂ ಆರೋಗ್ಯ ಲಾಭಗಳಿವೆ

ಸುದ್ದಿಒನ್ : ಅನೇಕ ಜನರು ಬೆಳಿಗ್ಗೆ ಹಲ್ಲುಜ್ಜಿದ ನಂತರವೇ ಏನನ್ನಾದರೂ ತಿನ್ನಲು ಅಥವಾ ಕುಡಿಯಲು ಬಯಸುತ್ತಾರೆ. ಹಲ್ಲುಜ್ಜದೆ ನೀರು ಕುಡಿಯುವುದು ಉತ್ತಮವೇ ? ವೈದ್ಯರ ಪ್ರಕಾರ ಒಬ್ಬ ವ್ಯಕ್ತಿಯು ಆರೋಗ್ಯವಾಗಿರಲು ದಿನಕ್ಕೆ 8 ರಿಂದ

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು.

ಇಂದಿನ ರಾಶಿ ಫಲ. ಈ ರಾಶಿಗಳ ಮದುವೆ, ಸಂತಾನ ವಿಳಂಬವೇಕೆ? ಇಷ್ಟರಾರ್ಜಿತ ಕೆಲಸ ಕಾರ್ಯಗಳು ಏಕೆ ನೆರವೇರುತ್ತಿಲ್ಲ? ಸೂಕ್ತ ಮಾಹಿತಿ ನೀಡಲಾಗುವುದು. ಮಂಗಳವಾರ ರಾಶಿ ಭವಿಷ್ಯ -ಮೇ-7,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

error: Content is protected !!