Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡಿಗರ ಹಿರಿಮೆ ಹೆಚ್ಚಿಸಿದ ಖರ್ಗೆ ಗೆಲುವು : ಮಾಜಿ ಸಚಿವ ಎಚ್.ಆಂಜನೇಯ

Facebook
Twitter
Telegram
WhatsApp

 

ಚಿತ್ರದುರ್ಗ, (ಅ.19) : ಹಿರಿಯ ನಾಯಕ, ಮುತ್ಸದ್ಧಿ, ಅನುಭವಿ ಸಂಸದೀಯ ಪಟು, ಅಜಾತಶತ್ರು ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಭಾರಿ ಬಹುಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಕನ್ನಡಿಗರ ಹಿರಿಮೆ ಹೆಚ್ಚಿಸಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಎಚ್.ಆಂಜನೇಯ ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ರಾಷ್ಟ್ರನಾಯಕ, ಚಿತ್ರದುರ್ಗ ಜಿಲ್ಲೆಯವರೇ ಆದ ಎಸ್.ನಿಜಲಿಂಗಪ್ಪ ಬಳಿಕ ಜಗತ್ತಿನಲ್ಲಿ ದೊಡ್ಡ ಇತಿಹಾಸ, ಸ್ವಾತಂತ್ರೃ ಹೋರಾಟದ ಹಿನ್ನೆಲೆ ಹೊಂದಿರುವ ಅಖಿಲ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ಕರ್ನಾಟಕ ರಾಜ್ಯಕ್ಕೆ ಲಭಿಸಿರುವುದು ಕನ್ನಡಿಗರಿಗೆ ಹೆಮ್ಮೆ ವಿಷಯ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಶಾಸಕರು, ಸಂಸದರು ಹಾಗೂ ರಾಜ್ಯ, ಕೇಂದ್ರ ಸರ್ಕಾರದಲ್ಲಿ ಮಂತ್ರಿಗಳಾಗಿ ದಶಕಗಳ ಕಾಲ ಆಡಳಿತ ನಡೆಸಿದ ಹಾಗೂ  ವಿಧಾನಸಭೆ, ಲೋಕಸಭೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿ, ವಿರೋಧ ಪಕ್ಷಗಳ ನಾಯಕರಿಂದಲೂ ಮೆಚ್ಚುಗೆ ಗಳಿಸಿರುವ ಮಲ್ಲಿಕಾರ್ಜುನ ಖರ್ಗೆ, ಕಾರ್ಮಿಕ ಇಲಾಖೆ ಕೇಂದ್ರ ಸಚಿವರಾಗಿದ್ದ ವೇಳೆ ಕಾರ್ಮಿಕರ ಹಿತಕ್ಕಾಗಿ ಮಾಡಿದ ಯೋಜನೆಗಳು ಅದ್ವಿತೀಯವಾಗಿವೆ.
ಜೊತೆಗೆ ಹೈದರಬಾದ್ ಕರ್ನಾಟಕಕ್ಕೆ 371 ಜೆ ವಿಶೇಷ ಸೌಲಭ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನದ ಸುರಿಮಳೆಯನ್ನೇ ಕೇಂದ್ರ ಸುರಿಸುವಂತೆ ಮಾಡಿದವರಲ್ಲಿ ಖರ್ಗೆ ಪ್ರಮುಖರಾಗಿದ್ದಾರೆ.

ಪ್ರಸ್ತುತ ತೀವ್ರ ಕುತೂಹಲ ಕೆರಳಿಸಿದ್ದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ್ ಖರ್ಗೆ ಮತ್ತು ಶಶಿ ತರೂರು ಇಬ್ಬರು, ಪ್ರಜಾಪ್ರಭುತ್ವದ ತಳಹದಿಯಲ್ಲಿ ಚುನಾವಣೆ ಎದುರಿಸಿ, ಇದರಲ್ಲಿ ಕರ್ನಾಟಕ ರಾಜ್ಯದ ಖರ್ಗೆ ಬಹುಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ರಾಜ್ಯ, ರಾಷ್ಟ್ರ ರಾಜಕಾಣದಲ್ಲಿ ಬದಲಾವಣೆ ಮುನ್ಸೂಚನೆಗೆ ಮುನ್ನುಡಿ ಬರೆದಿದೆ.

ಉತ್ತರಭಾರತದವರೇ ಹೆಚ್ಚಾಗಿ ರಾಷ್ಟ್ರರಾಜಕಾರಣದಲ್ಲಿ ಮಿಂಚುವ ಸಂದರ್ಭ, ಎಐಸಿಸಿ ಅಧ್ಯಕ್ಷರಾಗಿ ಎಸ್.ನಿಜಲಿಂಗಪ್ಪ, ಪ್ರಧಾನಮಂತ್ರಿಯಾಗಿ ಎಚ್.ಡಿ.ದೇವೇಗೌಡರ ಬಳಿಕ ಅತ್ಯುನ್ನತ ಎಐಸಿಸಿ ಅಧ್ಯಕ್ಷ ಸ್ಥಾನವನ್ನು ಖರ್ಗೆ ಅಲಂಕರಿಸುತ್ತಿರುವ ಸಂಭ್ರಮಕ್ಕೆ ಕಾರಣವಾಗಿದೆ.

ಮೊದಲು ದೇಶ, ನಂತರ ಪಕ್ಷ, ಬಳಿಕ ರಾಜಕಾರಣ, ಇದೆಲ್ಲದರ ನಂತರ ವೈಯಕ್ತಿಕ ಹಿತಾಸಕ್ತಿ ಎಂಬ ಸಿದ್ಧಾಂತದಲ್ಲಿ 50 ವರ್ಷ ಸುಧೀರ್ಘ ರಾಜಕಾರಣ ಮಾಡಿದ ಖರ್ಗೆ ಅವರಿಂದ ರಾಜ್ಯಕ್ಕೆ ಈಗಾಗಲೇ ಅಪಾರ ಕೊಡುಗೆ ಲಭಿಸಿದ್ದು, ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಈ ಸಂದರ್ಭ ಖರ್ಗೆ ಅವರಿಂದ ಇನ್ನೂ ಹೆಚ್ಚು ಯೋಜನೆಗಳು ರಾಜ್ಯಕ್ಕೆ ಲಭಿಸುವ ಸಾಧ್ಯತೆ ಹೆಚ್ಚು ಇದೆ.
ನಮ್ಮಂತಹ ಅನೇಕರ ಬೆಳವಣಿಗೆಯಲ್ಲಿ ಆಸ್ಕರ್ ಫರ್ನಾಂಡೀಸ್, ಮಲ್ಲಿಕಾರ್ಜುನ ಖರ್ಗೆ ಅವರ ಸಹಕಾರ ಅಪಾರವಾಗಿದ್ದು, ಪ್ರಸ್ತುತ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಪಕ್ಷ ನಿಷ್ಠ ನಮ್ಮಂತಹ ಅನೇಕರಿಗೆ ಸಂತಸ ತಂದಿದೆ.

ಮುಂದಿನ ದಿನಗಳಲ್ಲಿ ಇವರ ನಾಯಕತ್ವದಲ್ಲಿ ಪಕ್ಷ ಬಲಿಷ್ಠಗೊಳ್ಳಲಿದ್ದು, ಸರ್ವ ಸಮುದಾಯದವರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವ ಹಾಗೂ ಸಂಸತ್‌ನಲ್ಲಿ ಜನವಿರೋಧಿ ನೀತಿಗಳಿಗೆ ಕಡಿವಾಣ ಹಾಕಲು ಸಹಕಾರಿ ಆಗಲಿದೆ ಎಂದು ಆಂಜನೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!