ನವದೆಹಲಿ: ಇಷ್ಟು ವರ್ಷದ ಇತಿಹಾಸದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಮೊದಲ ಬಾರಿಗೆ ಗಾಂಧಿ ಕುಟುಂಬದ ಹೊರತಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಕ್ಟೋಬರ್ 17ರಂದು ನಡೆದ ಚುನಾವಣೆಯಲ್ಲಿ ಹಿರಿಯ ಮುತ್ಸದ್ಧಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಶಶಿ ತರೂರ್ ಸ್ಪರ್ಧೆ ನಡೆಸಿದ್ದರು. ಅದರ ಫಲಿತಾಂಶ ಇಂದು ಪ್ರಕಟವಾಗಿದ್ದು, ನಿರೀಕ್ಷೆಯಂತೆ ಮಲ್ಲಿಕಾರ್ಜುನ ಖರ್ಗೆ ಅವರೇ ಅಧ್ಯಕ್ಷರಾಗಿದ್ದಾರೆ.
My best wishes to Shri Mallikarjun Kharge Ji for his new responsibility as President of @INCIndia. May he have a fruitful tenure ahead. @kharge
— Narendra Modi (@narendramodi) October 19, 2022
ಇನ್ನು ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಟ್ವೀಟ್ ಮೂಲಕ ಶುಭ ಕೋರಿರುವ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಹೊಸ ಜವಬ್ದಾರಿ ವಹಿಸಿಕೊಂಡಿದ್ದಾರೆ. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನನ್ನ ಶುಭಾಶಯ. ಮಲ್ಲಿಕಾರ್ಜುನ ಖರ್ಗೆ ಅವರು ಮುಂದಿನ ದಿನಗಳಲ್ಲಿ ಫಲಪ್ರದವಾದ ಅಧಿಕಾರವನ್ನು ಹೊಂದಲಿ ಎಂದು ಟ್ವೀಟ್ ಮಾಡಿದ್ದಾರೆ.