ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸುವುದಿಲ್ಲ, ಆದರೂ ಅವರು ಶ್ರೀಮಂತರಲ್ಲವೇ? : ಬಿಜೆಪಿ ಶಾಸಕ

 

ಪಾಟ್ನಾ: ಬಿಹಾರದ ಬಿಜೆಪಿ ಶಾಸಕ ಲಾಲನ್ ಪಾಸ್ವಾನ್ ಅವರು ಹಿಂದೂ ದೇವತೆಗಳ ಬಗ್ಗೆ ಹೇಳಿಕೆ ನೀಡಿ ಬುಧವಾರ ವಿವಾದಕ್ಕೆ ಒಳಗಾಗಿದ್ದಾರೆ. ಭಾಗಲ್ಪುರ ಜಿಲ್ಲೆಯ ಪಿರ್ಪೈಂಟಿ ವಿಧಾನಸಭಾ ಕ್ಷೇತ್ರದ ಶಾಸಕರು ಹಿಂದೂ ನಂಬಿಕೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿ ತಮ್ಮ ನಿಲುವನ್ನು ಸಮರ್ಥಿಸಿಕೊಂಡರು.

ಅವರು ಈ ಹೇಳಿಕೆ ನೀಡಿದ ನಂತರ ಅವರ ವಿರುದ್ಧ ಭಾಗಲ್ಪುರದ ಶೆರ್ಮರಿ ಬಜಾರ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು ಮತ್ತು ಅವರ ಪ್ರತಿಕೃತಿಯನ್ನು ದಹಿಸಲಾಯಿತು.

ಪಾಸ್ವಾನ್ ಅವರು ದೀಪಾವಳಿಯಂದು ಲಕ್ಷ್ಮಿ ದೇವಿಯ ಆರಾಧನೆಯನ್ನು ಪ್ರಶ್ನಿಸಿದ್ದಾರೆ. ಲಕ್ಷ್ಮಿ ದೇವಿಯನ್ನು ಪೂಜಿಸುವುದರಿಂದಲೇ ನಮಗೆ ಸಂಪತ್ತು ಬರುತ್ತದೆ ಎನ್ನುವುದಾದರೆ, ಮುಸ್ಲಿಮರಲ್ಲಿ ಕೋಟ್ಯಾಧಿಪತಿಗಳು ಇರುತ್ತಿರಲಿಲ್ಲ. ಏಕೆಂದರೆ ಮುಸ್ಲಿಮರು ಲಕ್ಷ್ಮಿಯನ್ನು ಪೂಜಿಸುವುದಿಲ್ಲ. ಆದರೂ ಕೂಡ ಅವರು ಶ್ರೀಮಂತರಲ್ಲವೇ? ಮುಸ್ಲಿಮರು ಸರಸ್ವತಿ ದೇವಿಯನ್ನು ಪೂಜಿಸುವುದಿಲ್ಲ. ಆದರೂ  ಮುಸ್ಲಿಮರಲ್ಲಿ ವಿದ್ವಾಂಸರು ಇಲ್ಲವೇ? ಅವರು IAS ಅಥವಾ IPS ಆಗುವುದಿಲ್ಲವೇ?” ಎಂದು ಶಾಸಕರು ಪ್ರಶ್ನಿಸಿದರು.

ಮುಂದುವರೆದು ಅವರು ಮಾತನಾಡಿ, ಆತ್ಮ ಮತ್ತು ಪರಮಾತ್ಮ ” ಪರಿಕಲ್ಪನೆಯು ಕೇವಲ ಜನರ ನಂಬಿಕೆಯಾಗಿದೆ. ನೀವು ನಂಬಿದರೆ ಅದು ದೇವತೆ, ಇಲ್ಲದಿದ್ದರೆ ಅದು ಕೇವಲ ಕಲ್ಲಿನ ವಿಗ್ರಹ. ನಾವು ದೇವರು ಮತ್ತು ದೇವತೆಗಳನ್ನು ನಂಬುತ್ತೇವೆಯೇ ಅಥವಾ ನಂಬುವುದಿಲ್ಲವೇ ಎಂಬುದು ನಮಗೆ ಬಿಟ್ಟದ್ದು. ಅದನ್ನು ವೈಜ್ಞಾನಿಕ ತಳಹದಿಯ ಮೇಲೆ ಯೋಚಿಸಬೇಕು.ತಾರ್ಕಿಕ ತೀರ್ಮಾನ, ನೀವು ನಂಬುವುದನ್ನು ನಿಲ್ಲಿಸಿದರೆ, ನಿಮ್ಮ ಬೌದ್ಧಿಕ ಸಾಮರ್ಥ್ಯವು ಹೆಚ್ಚಾಗುತ್ತದೆ ಎಂದು ಹೇಳಿದರು.

ಬಜರಂಗಬಲಿ ಎಂದರೆ ದೇವರು ಶಕ್ತಿಯನ್ನು ನೀಡುತ್ತಾನೆ ಎಂದು ನಂಬಲಾಗಿದೆ. ಮುಸ್ಲಿಮರು ಅಥವಾ ಕ್ರಿಶ್ಚಿಯನ್ನರು ಬಜರಂಗಬಲಿಯನ್ನು ಪೂಜಿಸುವುದಿಲ್ಲ. ಆದರೂ ಅವರು ಶಕ್ತಿಶಾಲಿಗಳಲ್ಲವೇ? ನೀವು ನಂಬುವುದನ್ನು ನಿಲ್ಲಿಸಿದ ದಿನ, ಇವೆಲ್ಲವೂ ಕೊನೆಗೊಳ್ಳುತ್ತವೆ” ಎಂದು  ಪಾಸ್ವಾನ್ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *