Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತದಲ್ಲಿಯೇ ಕೆ.ಎಸ್.ಆರ್.ಟಿ.ಸಿ.ಗೆ ಉತ್ತಮ ಹೆಸರಿದೆ : ಶಾಸಕ ಎಂ.ಚಂದ್ರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಸಂಸ್ಥೆ ತೊಂದರೆಯಲ್ಲಿದ್ದರೂ ಪ್ರಯಾಣಿಕರಿಗೆ ಹೊರೆಯಾಗಬಾರದೆಂಬ ಉದ್ದೇಶದಿಂದ ಪ್ರಯಾಣ ದರವನ್ನು ಹೆಚ್ಚಿಸಿಲ್ಲ ಎಂದು ಹೊಳಲ್ಕೆರೆ ಶಾಸಕ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಹೇಳಿದರು.

ಕೆ.ಎಸ್.ಆರ್.ಟಿ.ಸಿ.ಜಿಲ್ಲಾ ಘಟಕದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಮಾತನಾಡಿದರು.
ಡೀಸೆಲ್ ಲೀ.63 ರೂ.ಇದ್ದಾಗ ಪ್ರಯಾಣ ದರ ಹೆಚ್ಚಳವಾಗಿತ್ತು. ಈಗ ಲೀ.ಗೆ 130 ರೂ.ಗಳಾಗಿದ್ದರು ಪ್ರಯಾಣಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ದರ ಏರಿಸಿಲ್ಲ. ನಾಲ್ಕು ವಿಭಾಗಗಳಿಂದ ಒಂದು ಲಕ್ಷ 30 ಸಾವಿರ ನೌಕರರಿದ್ದು, 30 ಸಾವಿರ ಬಸ್‍ಗಳಿವೆ. ಐವತ್ತು ಸ್ಲೀಪರ್ ಕೋಚ್, ಐವತ್ತು ವೋಲ್ವೋ ಒಳಗೊಂಡಂತೆ ಆರು ನೂರು ಹೊಸ ಬಸ್‍ಗಳನ್ನು ಖರೀಧಿಸಲು ರಾಜ್ಯದ ಮುಖ್ಯಮಂತ್ರಿ ಹಣ ಮಂಜೂರು ಮಾಡಿದ್ದಾರೆ.

ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಹಕಾರ ನೀಡಿದ್ದರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.
ನಮ್ಮ ಸಂಸ್ಥೆ ನಷ್ಟದಲ್ಲಿದ್ದರೂ ಪ್ರತಿ ತಿಂಗಳು ಒಂದನೆ ತಾರೀಖಿನಂದು ಸಿಬ್ಬಂದಿಗಳಿಗೆ ವೇತನ ನೀಡುತ್ತೇವೆ.

ಎಸ್.ಬಿ.ಐ.ಬ್ಯಾಂಕ್‍ನಲ್ಲಿ ಚಾಲಕರು, ನಿರ್ವಾಹಕರು ಖಾತೆ ತೆರೆದರೆ ಸಾಕು ಆಕಸ್ಮಿಕವಾಗಿ ಅಪಘಾತದಲ್ಲಿ ಮೃತಪಟ್ಟರೆ ಐವತ್ತು ಲಕ್ಷ ರೂ. ಹೆಚ್ಚು ಗಾಯಗಳಾದರೆ ಇಪ್ಪತ್ತು ಲಕ್ಷ ರೂ. ಸಣ್ಣಪುಟ್ಟ ತೊಂದರೆಗಳಾದರೆ ಹತ್ತು ಲಕ್ಷ ರೂ.ಗಳ ಪರಿಹಾರ ನೀಡುವ ಅತ್ಯುತ್ತಮ ಯೋಜನೆಯನ್ನು ಜಾರಿಗೆ ತರಲಾಗಿದೆ. ಹಲವಾರು ಇನ್ಸುರೆನ್ಸ್ ಕಂಪನಿಗಳು ನಮ್ಮ ಹತ್ತಿರ ಬರುತ್ತಿವೆ. ನೀವು ತಿಂಗಳಿಗೆ ಕೇವಲ 54 ರೂ.ಕಟ್ಟಿದರೆ ಕರ್ತವ್ಯದಲ್ಲಿದ್ದಾಗ ಅಪಘಾತವಾಗಿ ಮೃತಪಟ್ಟರೆ ಐವತ್ತು ಲಕ್ಷ ರೂ.ಕೊಡುತ್ತೇವೆ. ಪ್ರಯಾಣಿಕರ ಜೀವ ಚಾಲಕರುಗಳ ಕೈಯಲ್ಲಿದೆ. ಕರ್ತವ್ಯ ಪ್ರಜ್ಞೆಯುಳ್ಳ ಸಿಬ್ಬಂದಿ ನಮ್ಮಲ್ಲಿರುವುದರಿಂದ ಇಡಿ ಭಾರತದಲ್ಲಿಯೇ ಕೆ.ಎಸ್.ಆರ್.ಟಿ.ಸಿ.ಗೆ ಉತ್ತಮ ಹೆಸರಿದೆ ಎಂದು ಗುಣಗಾನ ಮಾಡಿದರು.

ಮಹರ್ಷಿ ವಾಲ್ಮೀಕಿ ಹಲವಾರು ಮಹತ್ತರ ವಿಚಾರಗಳನ್ನು ರಾಮಾಯಣದ ಮೂಲಕ ಸಮಾಜಕ್ಕೆ ಪರಿಚಯಿಸಿದ್ದಾರೆ. ಶ್ರೀರಾಮಚಂದ್ರ, ಲಕ್ಷ್ಮಣ, ಸೀತಾಮಾತೆ, ರಾವಣ ಇವರುಗಳ ಆದರ್ಶಗಳನ್ನು ರಾಮಾಯಣದಲ್ಲಿ ಚಿತ್ರಿಸಿದ್ದಾರೆ. ಹಾಗಾಗಿ ಮಹರ್ಷಿ ವಾಲ್ಮೀಕಿ ಇಂದಿಗೂ ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆಂದು ತಿಳಿಸಿದರು.
ಸಾಹಿತಿ ಬಿ.ಎಲ್.ವೇಣು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಿ.ಮಂಜುನಾಥ್, ಪ್ರಾಧ್ಯಾಪಕ ಕರಿಯಪ್ಪ ಮಾಳಿಗೆ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕಾಂತರಾಜ್, ಕಾರ್ಮಿಕ ಇಲಾಖೆ ಅಧಿಕಾರಿ ಸಿ.ಇ.ಶ್ರೀನಿವಾಸಮೂರ್ತಿ, ಎಸ್.ಎಸ್.ನಿರಂಜನಮೂರ್ತಿ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಹೆಚ್.ನಾಗರಾಜ್, ರೈತ ಮುಖಂಡ ಕೆ.ಪಿ.ಭೂತಯ್ಯ, ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!