ಚಿತ್ರದುರ್ಗ,(ಅಕ್ಟೋಬರ್ 20) :ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇದೇ ಅಕ್ಟೋಬರ್ 21ರಂದು ಬೆಳಿಗ್ಗೆ 10.30ಕ್ಕೆ ಲೋಕಸಭಾ ಕ್ಷೇತ್ರದಲ್ಲಿ ಇರುವ ರೈಲ್ವೆ ಅಂಡರ್, ಓವರ್ ಬ್ರಿಡ್ಜ್ಗಳಲ್ಲಿ ಕಂಡು ಬಂದಿರುವ ಸಮಸ್ಯೆಗಳು ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್, ಓವರ್ ಬ್ರಿಡ್ಜ್ಗಳಲ್ಲಿ ಕಂಡು ಬಂದಿರುವ ಸಮಸ್ಯೆ, ಅಗತ್ಯತೆಗಳ ಕುರಿತು ಸಭೆ ನಡೆಯಲಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಸಭೆಯ ಅಧ್ಯಕ್ಷತೆ ವಹಿಸುವರು.
ಸಭೆಯಲ್ಲಿ ಸಾರ್ವಜನಿಕರಿಂದ ಕೇಳಿಬಂದ ದೂರು ಹಾಗೂ ಅಹವಾಲುಗಳ ಬಗ್ಗೆ ಚರ್ಚಿಸಿ ಸಮಸ್ಯೆಗಳ ಇತ್ಯರ್ಥಕ್ಕೆ ಸೂಕ್ತ ಪರಿಹಾರೋಪಾಯಗಳನ್ನು ಸಭೆಯಲ್ಲಿ ಸಚಿವರು ಸೂಚಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.