ಸುದ್ದಿಒನ್ ವೆಬ್ ಡೆಸ್ಕ್
ನವದೆಹಲಿ : ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರು ಗುರುವಾರ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಎಲ್ಲರ ಕಣ್ಣು ಭಾರತೀಯ ಮೂಲದ ಮಾಜಿ ಚಾನ್ಸೆಲರ್ ರಿಷಿ ಸುನಕ್ ಅವರ ಮೇಲೆ ನೆಟ್ಟಿದೆ.
ಕಳೆದ ತಿಂಗಳು ಪ್ರಧಾನಿ ಹುದ್ದೆಗಾಗಿ ನಡೆದ ಚುನಾವಣೆಯಲ್ಲಿ ಲಿಜ್ ಟ್ರಸ್ ಅವರ ವಿರುದ್ಧ ಸೋಲನ್ನು ಅನುಭವಿಸಿದ್ದರು. ಆದರೆ ಈಗ ಉನ್ನತ ಹುದ್ದೆಗೆ ಪ್ರಮುಖ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ.
ಈ ಸಂದರ್ಭದಲ್ಲಿ ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಚುನಾವಣೆ ನಡೆದರೆ ಭಾರತೀಯ ಮೂಲದ ಮಾಜಿ ಚಾನ್ಸೆಲರ್ ರಿಷಿ ಸುನಕ್ ಅವರು ತಮ್ಮ ಪ್ರತಿಸ್ಪರ್ಧಿ ಲಿಜ್ ಟ್ರಸ್ ಅವರನ್ನು ಸೋಲಿಸುತ್ತಾರೆ ಎಂದು ಸಮೀಕ್ಷೆಯೊಂದು ತಿಳಿಸಿದೆ.