ಬೆಂಗಳೂರು: ಸೈನಿಕ ಕಲ್ಯಾಣ ಇಲಾಖೆ ಕರ್ನಾಟಕದಲ್ಲಿಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 13 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನವೆಂಬರ್ 7 ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಆಫ್ಲೈನ್ ಮೂಲಕ ಸಲ್ಲಿಕೆ ಮಾಡಬೇಕಿದೆ. ಅಕ್ಟೋಬರ್ 18 ರಿಂದಲೇ ಅರ್ಜಿ ಸ್ವೀಕರಿಸಲಾಗಿದೆ. 21400-42000 ರೂ. ಪ್ರತಿ ತಿಂಗಳು ವೇತನ ಇರಲಿದೆ.
ಸೈನಿಕ ಕಲ್ಯಾಣ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷಗಳು ಮೀರಿರಬಾರದು. ಸೈನಿಕ ಕಲ್ಯಾಣ ಇಲಾಖೆ ಕರ್ನಾಟಕ ನಿಯಮಗಳ ಪ್ರಕಾರ ಇರಲಿದೆ. ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ.
ಅರ್ಜಿ ಸಲ್ಲಿಕೆ ವಿಳಾಸ: ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, #58, ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ಭವನ, ಫೀಲ್ಡ್ ಮಾರ್ಷಲ್ ಕೆಎಂ ಕರಿಯಪ್ಪ ರಸ್ತೆ, ಬೆಂಗಳೂರು – 560025.ಹೆಚ್ಚಿನ ಮಾಹಿತಿಗಾಗಿ sainikwelfare.karnataka.gov.in ವೆಬ್ಸೈಟ್ ಗೆ ಭೇಟಿ ನೀಡಿ.