Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಲ್ಲಿ 118 ಪೋಕ್ಸೋ ಕೇಸ್‍ಗಳಿವೆ : ಎಸ್‍ಪಿ ಪರಶುರಾಂ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಅ.21) : ಜಿಲ್ಲೆಯಲ್ಲಿ
118 ಪೋಕ್ಸೋ ಕೇಸ್‍ಗಳಿವೆ. ಕಳೆದ ವರ್ಷ 82 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದವು, ಈ ಪೈಕಿ 5 ಸುಳ್ಳು ಪ್ರಕರಣಗಳಾಗಿದ್ದವು, 72 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿವೆ.  ಈ ವರ್ಷ 79 ಪೋಕ್ಸೋ ಕೇಸ್‍ಗಳು ದಾಖಲಾಗಿದ್ದು, ಈ ಪೈಕಿ 34 ತನಿಖೆಯಲ್ಲಿವೆ, 8 ಪ್ರಕರಣಗಳಲ್ಲಿ ಚಾರ್ಜ್ ಶೀಟ್ ಹಾಕಲು ಸಿದ್ಧಪಡಿಸಲಾಗಿದೆ.ಇವುಗಳಲ್ಲಿ ಅವಧಿ ಮೀರಿದ ಯಾವುದೇ ಪ್ರಕರಣಗಳು ಇಲ್ಲ
ಎಂದು ಎಸ್‍ಪಿ ಪರಶುರಾಂ ತಿಳಿಸಿದ್ದಾರೆ.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಜಯಶ್ರೀ ಅವರ ನೇತೃತ್ವದಲ್ಲಿ ನಡೆದ ಆರ್‍ಟಿಇ, ಪೋಕ್ಸೋ ಹಾಗೂ ಬಾಲನ್ಯಾಯ ಕಾಯ್ದೆ ಅನುಷ್ಠಾನ ಕುರಿತು ಮತ್ತು ಮಕ್ಕಳೂ ಎದುರಿಸುತ್ತಿರುವ ಇನ್ನಿತರೆ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಆಯೋಗದ ಅಧ್ಯಕ್ಷರು ಪ್ರತಿಕ್ರಿಯಿಸಿ, ಕೋವಿಡ್ ಲಾಕ್‍ಡೌನ್ ಅವಧಿಯಲ್ಲಿ ಬಾಲ್ಯ ವಿವಾಹ ಹಾಗೂ ಪೋಕ್ಸೋ ಪ್ರಕರಣಗಳು ಹೆಚ್ಚು ವರದಿಯಾಗಿವೆ. ಜಿಲ್ಲೆಯಲ್ಲಿ 2021 ರಲ್ಲಿ 136 ಹಾಗೂ ಈ ವರ್ಷ 71 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ.

ಪೋಕ್ಸೋ ಪ್ರಕರಣಗಳಲ್ಲಿ ಪೊಲೀಸರು 60 ದಿನಗಳ ಒಳಗಾಗಿ ಚಾರ್ಜ್ ಶೀಟ್ ಸಲ್ಲಿಸಬೇಕು.  ಬಾಲ್ಯ ವಿವಾಹ ಮಾಡಲು ಪ್ರಯತ್ನಿಸುವವರ ವಿರುದ್ಧ ಎಫ್‍ಐಆರ್ ದಾಖಲಿಸಬೇಕು ಎಂದು ಸೂಚನೆ ನೀಡಿದರು.

ಚಿತ್ರದುರ್ಗ ಮಠದ ಸ್ವಾಮೀಜಿಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಸಹಕಾರದಿಂದ ಉತ್ತಮವಾಗಿ ತನಿಖಾ ಕಾರ್ಯ ಕೈಗೊಳ್ಳಲು ಸಾಧ್ಯವಾಗಿದೆ ಎಂದು ಎಸ್‍ಪಿ ಅವರು ಹೇಳಿದರು.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಡಾ. ಆರ್. ಪ್ರಭಾಕರ್ ಅವರು ಮಾತನಾಡಿ, ಮಠದ ಆವರಣದಲ್ಲಿನ ಹಾಸ್ಟೆಲ್‍ನಲ್ಲಿನ ಒಟ್ಟು 103 ಮಕ್ಕಳ ಪೈಕಿ 44 ಮಕ್ಕಳು ಚಿತ್ರದುರ್ಗ ಜಿಲ್ಲೆಯವರಾಗಿದ್ದು, 44 ಮಕ್ಕಳಿಗೂ ಮೂರು ಬಾರಿ ಆಪ್ತ ಸಮಾಲೋಚನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.  ಅಲ್ಲದೆ ಉಳಿದ ಜಿಲ್ಲೆಗಳಿಗೆ ಸಂಬಂಧಿಸಿದ ಮಕ್ಕಳಿಗೆ ಆಯಾ ಜಿಲ್ಲೆಯಲ್ಲಿಯೇ ಮಕ್ಕಳ ಕಲ್ಯಾಣ ಸಮಿತಿಯಿಂದ ಮೂರು ಬಾರಿ ಆಪ್ತ ಸಮಾಲೋಚನೆ ನಡೆಸಲು ನಿರ್ದೇಶನವಿದೆ ಎಂದರು.

ಎಸ್‍ಪಿ ಪರಶುರಾಮ್ ಅವರು ಮಾತನಾಡಿ, ಹಾಸ್ಟೆಲ್‍ನಲ್ಲಿದ್ದು, ಪ್ರಸ್ತುತ ಬೇರೆಡೆ ಹೋಗಿರುವ ಮಕ್ಕಳ ಪೈಕಿ, ಕಳೆದ 5 ವರ್ಷಗಳ ಅವಧಿಯಲ್ಲಿ ಹಾಸ್ಟೆಲ್‍ನಲ್ಲಿದ್ದು, ಬೇರೆಡೆ ಹೋಗಿರುವ ಮಕ್ಕಳ ವಿವರವನ್ನು ಒದಗಿಸಿದಲ್ಲಿ, ದೂರುಗಳ ಬಗ್ಗೆ ತನಿಖೆಗೆ ಅನುಕೂಲವಾಗಲಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಆಯೋಗದ ಅಧ್ಯಕ್ಷರು, ಮಕ್ಕಳ ಕಲ್ಯಾಣ ಸಮಿತಿಯ ನಿರ್ದೇಶನ ಪಡೆದು, ಬಳಿಕ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಮಠದ ಹಾಸ್ಟೆಲ್‍ನಲ್ಲಿದ್ದ ಮಕ್ಕಳ ವಿವರ ಸಂಗ್ರಹಿಸಿ ಎಸ್‍ಪಿ ಅವರಿಗೆ ನೀಡಲು ಕ್ರಮ ವಹಿಸಬೇಕು.  ರಕ್ಷಣೆಯಲ್ಲಿರುವ ಮಕ್ಕಳ ಶಿಕ್ಷಣ ಅಬಾಧಿತವಾಗಿ ಮುಂದುವರೆಸಲು ಅನುಕೂಲವಾಗುವಂತೆ ಮಕ್ಕಳು ಕೋರುವ ಕಡೆ ಸರ್ಕಾರಿ ಹಾಸ್ಟೆಲ್‍ನಲ್ಲಿ ಪ್ರವೇಶಕ್ಕೆ ಅವಕಾಶ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಉಪಕಾರ್ಯದರ್ಶಿ ಅವರು ಮಕ್ಕಳ ವಿದ್ಯಾಭ್ಯಾಸಕ್ಕೆ ಸೂಕ್ತ ಹಾಸ್ಟಲ್ ವ್ಯವಸ್ಥೆ ಮಾಡಿ ಬಳಿಕ ಘಟನೋತ್ತರ ಅನುಮತಿ ಪಡೆಯಲಾಗುವುದು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

14 ತಿಂಗಳ ಮಗುವಿಗೆ ಯಶಸ್ವಿ ಹೃದಯ ಕಸಿ : ಬೆಂಗಳೂರಿನಲ್ಲಿ ವೈದ್ಯರ ಅಪರೂಪದ ಸಾಧನೆ..!

ಬೆಂಗಳೂರು : ಇಲ್ಲಿನ ನಾರಾಯಣ ಹೃದಯಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದೆ. ಅತಿ ಚಿಕ್ಕ ವಯಸ್ಸಿನಲ್ಲೇ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ 14 ತಿಂಗಳ ಮಗುವಿಗೆ ನಾರಾಯಣ ಆಸ್ಪತ್ರೆ ವೈದ್ಯರು ಹೃದಯ ಕಸಿ ಚಿಕಿತ್ಸೆ ಯಶಸ್ವಿಯಾಗಿ

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ಧಾರಣೆ…!

ಸುದ್ದಿಒನ್, ಚಿತ್ರದುರ್ಗ, ನವಂಬರ್. 23 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ನವಂಬರ್. ,23 ) ಹತ್ತಿ ಮಾರುಕಟ್ಟೆ ಇದ್ದು, ಧಾರಣೆಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ. ಹತ್ತಿ

IND vs AUS TEST | ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಪಟೆದ ಜಸ್ಪ್ರೀತ್ ಬುಮ್ರಾ : ಈ ಸಾಧನೆ ಮಾಡಿದ ಇತರ ಭಾರತೀಯ ಆಟಗಾರರ ಮಾಹಿತಿ ಇಲ್ಲಿದೆ…!

ಸುದ್ದಿಒನ್ | ಟೀಂ ಇಂಡಿಯಾ ವೇಗಿ ಮತ್ತು ನಾಯಕ ಜಸ್ಪ್ರೀತ್ ಬುಮ್ರಾ ಅವರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಟೆಸ್ಟ್‌ನಲ್ಲಿ ಶನಿವಾರ ಟೆಸ್ಟ್ ಕ್ರಿಕೆಟ್‌ನಲ್ಲಿ ಐದು ವಿಕೆಟ್‌ಗಳನ್ನು ಗಳಿಸುವ ಮೂಲಕ ಇತಿಹಾಸ ದಾಖಲಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ

error: Content is protected !!