Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವ ಸಂಪುಟದಲ್ಲಿ ಚಿತ್ರದುರ್ಗಕ್ಕೂ ಪ್ರಾತಿನಿಧ್ಯ : ಸಿಎಂ ಬೊಮ್ಮಾಯಿ

Facebook
Twitter
Telegram
WhatsApp

 

ಚಿತ್ರದುರ್ಗ,(ಅ.22) : ಜಿಲ್ಲೆಗೂ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಕೊಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಹೊಸದುರ್ಗದಲ್ಲಿ ನ್ಯಾಯಾಲಯ ಉದ್ಘಾಟನೆ ಹಾಗೂ ಇನ್ನಿತರ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಗೆ ಮಂತ್ರಿಗಿರಿ ನೀಡದೆ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ‌ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಶೀಘ್ರದಲ್ಲೇ ದೆಹಲಿಗೆ ತೆರಳುತ್ತೇನೆ. ಹೈಕಮಾಂಡ್ ಜತೆ ಚರ್ಚಿಸಿ ಚಿತ್ರದುರ್ಗ ಜಿಲ್ಲೆಗೂ ಪ್ರಾತಿನಿಧ್ಯ ಕೊಡಲು ಪ್ರಯತ್ನಿಸುತ್ತೇವೆ” ಎಂದು ಭರವಸೆ ನೀಡಿದರು.

ಜಿಲ್ಲೆಯ ಬಹು ನಿರೀಕ್ಷಿತ ಯೋಜನೆ ಭದ್ರಾ ಮೇಲ್ದಂಡೆ ಯೋಜನೆಯ ಇದರ ಕಾಮಗಾರಿ ತ್ವರಿತವಾಗಿ ಆಗುವಂತೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ
ಅಪ್ಪರ್ ಭದ್ರಾ ಮೇಲ್ದಂಡೆ ಯೋಜನೆ ಸಾರ್ವಜನಿಕ ಬಂಡವಾಳ ಹೂಡಿಕೆ ಸಮಿತಿ (PIB) ಅನುಮೋದನೆ ಆಗಿದೆ. ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಆಗಬೇಕಿದೆ.

ಈ ವಿಚಾರವಾಗಿ ಈಗಾಗಲೇ ಕೇಂದ್ರ ಜಲ ಸಂಪನ್ಮೂಲ ಸಚಿವರ ಜೊತೆ ಮಾತನಾಡಿದ್ದೇನೆ. ರಾಜ್ಯದಲ್ಲಿಯೇ ಮೊದಲ ರಾಷ್ಟ್ರೀಯ ನೀರಾವರಿ ಯೋಜನೆ ಆಗಲಿದೆ. ಅಲ್ಲಲ್ಲಿ ಭೂಸ್ವಾಧೀನ ಪ್ರಕ್ರಿಯೆ ಬಾಕಿಯಿದ್ದು, ಶೀಘ್ರ ಪೂರ್ಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಉಪಯುಕ್ತ ಮಾಹಿತಿ | ಬೆಳೆ ಪರಿಹಾರ ಪಾವತಿ ಸಂಬಂಧ ಸಹಾಯವಾಣಿ ಆರಂಭ : ಇಲ್ಲಿದೆ ತಾಲ್ಲೂಕುವಾರು ಮಾಹಿತಿ

ಚಿತ್ರದುರ್ಗ. ಮೇ.08:   ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ  ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

error: Content is protected !!