ಭಾರತ್ ಜೋಡೋ ಯಾತ್ರೆಗೆ ಬ್ರೇಕ್.. ದೆಹಲಿಗೆ ತೆರಳಿದ ರಾಹುಲ್ ಗಾಂಧಿ

 

ಸುದ್ದಿಒನ್ ವೆಬ್ ಡೆಸ್ಕ್

ಹೈದರಾಬಾದ್ : ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ತೆಲಂಗಾಣ ಪ್ರವೇಶಿಸಿದೆ. ರಾಹುಲ್ ಗಾಂಧಿ 4 ಕಿ.ಮೀ ಪಾದಯಾತ್ರೆ ಮೂಲಕ ಮೊದಲ ದಿನವನ್ನು ಮುಗಿಸಿದರು.

ಜೋಡೋ ಯಾತ್ರೆಯನ್ನು ಇದೇ ತಿಂಗಳ 26 ರವರೆಗೆ ಸ್ಥಗಿತಗೊಳಿಸಲಾಗಿದೆ.  ಅ. 27ರಂದು ರಾಹುಲ್ ಪಾದಯಾತ್ರೆ ಪುನರಾರಂಭವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಭಾರತದ ಜೋಡೋ ಯಾತ್ರೆಯನ್ನು ಯಾವ ಶಕ್ತಿಯೂ ತಡೆಯಲು ಸಾಧ್ಯವಿಲ್ಲ ಎಂದು ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ. ಭಾರತದ ಜೋಡೋ ಯಾತ್ರೆಯನ್ನು ರಾಷ್ಟ್ರೀಯ ಏಕತೆಯ ಸಲುವಾಗಿ ಕೈಗೊಳ್ಳಲಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ವಿಭಜಿಸಲು ಯತ್ನಿಸುತ್ತಿವೆ ಎಂದು ಆರೋಪಿಸಿದರು.

ಕುಟುಂಬ ಸದಸ್ಯರೊಂದಿಗೆ ದೀಪಾವಳಿ ಆಚರಿಸಲು ಮತ್ತು ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಮೂರು ದಿನಗಳ ಕಾಲ ಯಾತ್ರೆಯನ್ನು ನಿಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅಕ್ಟೋಬರ್ 27 ರಂದು ಮಕ್ತಲ್‌ನಿಂದ ಯಾತ್ರೆ ಪುನರಾರಂಭವಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *