ನವದೆಹಲಿ: ಬಹುಮತದಿಂದ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದು, ನಿನ್ನೆ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ. ಇದಾದ ಕೆಲವೇ ಗಂಟೆಗಳಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಶಶಿ ತರೂರ್ ಗೆ ಶಾಕ್ ನೀಡಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ CWC ರಚನೆ ಮಾಡಿದ್ದಾರೆ. ಇದರಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ 47 ಸದಸ್ಯರನ್ನು ಒಳಗೊಂಡಿದೆ. ಅಷ್ಟೇ ಅಲ್ಲ ಕರ್ನಾಟಕದಿಂದ ದಿನೇಶ್ ಗುಂಡೂರಾವ್, ಕೆ ಹೆಚ್ ಮುನಿಯಪ್ಪ, ಎಚ್ ಕೆ ಪಾಟೀಲ್ ಕೂಡ ಸ್ಥಾನ ಪಡೆದುಕೊಂಡಿದ್ದಾರೆ. ಆದರೆ ಶಶಿ ತರೂರ್ ಅವರನ್ನು ಕೈ ಬಿಡಲಾಗಿದೆ.
ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧವಾಗಿ ಶಶಿ ತರೂರ್ ಸ್ಪರ್ಧೆ ನಡೆಸಿದ್ದರು. ಆದರೆ ಮಲ್ಲಿಕಾರ್ಜುನ್ ಖರ್ಗೆ ಪರ ಫಲಿತಾಂಶ ಬಂದಿತ್ತು. ಫಲಿತಾಂಶ ಬಂದ ಮೇಲೆ ಶಶಿ ತರೂರ್, ಹಲವು ರೀತಿಯ ಆರೋಪಗಳನ್ನು ಮಾಡಿದ್ದರು. ಮತ ಎಣಿಕೆಯ ಮೇಲೆ ಅನುಮಾನ ಪಟ್ಟಿದ್ದು ಪಕ್ಷದಲ್ಲಿ ಇರಿಸು ಮುರಿಸು ತಂದಿತ್ತು. ಈ ಕಾರಣದಿಂದ ಅವರನ್ನು ದೂರ ಇಡಲಾಗಿದೆ ಎನ್ನಲಾಗುತ್ತಿತ್ತು.
ಇನ್ನು CWC ಸಮಿತಿ ಮೂಲಕವೇ ಕಾಂಗ್ರೆಸ್ ನ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಪಕ್ಷದ CWC ತಂಡದವರು ಹಾಗೂ ಪದಾಧಿಕಾರಿಗಳು ತಮ್ಮ ಸ್ವಂತ ತಂಡ ಆಯ್ಕೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಬೇರೆ ಹುದ್ದೆಗಳಿಗೆ ರಾಜೀನಾಮೆಯನ್ನು ನೀಡಿದ್ದಾರೆ.