ಸುದ್ದಿಒನ್ ವೆಬ್ ಡೆಸ್ಕ್
ಲಂಡನ್ : ಬ್ರಿಟನ್ ಪ್ರಧಾನಿಯಾಗಿ ರಿಷಿ ಸುನಕ್ ಅಧಿಕಾರ ವಹಿಸಿಕೊಂಡ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ದೂರವಾಣಿಯಲ್ಲಿ ಮಾತನಾಡಿದರು.
ಮೋದಿ, ರಿಷಿ ಸುನಕ್ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ, ಭಾರತ ಮತ್ತು ಯುಕೆ(ಬ್ರಿಟನ್) ನಡುವಿನ ಮುಕ್ತ ವ್ಯಾಪಾರ ಒಪ್ಪಂದವನ್ನು (ಎಫ್ಟಿಎ) ಶೀಘ್ರದಲ್ಲೇ ತೀರ್ಮಾನಿಸುವ ಅಗತ್ಯತೆಯ ಕುರಿತು ಉಭಯ ನಾಯಕರು ಚರ್ಚಿಸಿದರು ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
Glad to speak to @RishiSunak today. Congratulated him on assuming charge as UK PM. We will work together to further strengthen our Comprehensive Strategic Partnership. We also agreed on the importance of early conclusion of a comprehensive and balanced FTA.
— Narendra Modi (@narendramodi) October 27, 2022
‘ಇಂದು ರಿಷಿ ಸುನಕ್ ಅವರೊಂದಿಗೆ ಮಾತನಾಡಿ ಸಂತೋಷವಾಯಿತು.
ಯುಕೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಕ್ಕೆ ಅವರಿಗೆ ಅಭಿನಂದನೆಗಳು. ಎರಡೂ ದೇಶಗಳ ಸಮಗ್ರ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ. ಸಮಗ್ರ ಮತ್ತು ಸಮತೋಲಿತ ಎಫ್ಟಿಎಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ನಾವು ಒಪ್ಪಿಕೊಂಡಿದ್ದೇವೆ.’ ಎಂದು ಮೋದಿ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಮೋದಿಯವರೊಂದಿ ಫೋನ್ ನಲ್ಲಿ ಮಾತನಾಡಿದ ನಂತರ, ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅವರು ಮೋದಿ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ. ನಾನು ಬ್ರಿಟನ್ ಪ್ರಧಾನಿಯಾಗಿ ಹೊಸ ಜವಾಬ್ದಾರಿಯನ್ನು ವಹಿಸಿಕೊಂಡ ನನಗೆ ಅಮೂಲ್ಯವಾದ ಸಲಹೆಗಳನ್ನು ನೀಡಿದ ಪ್ರಧಾನಿ ಮೋದಿಯವರಿಗೆ ನಾನು ಕೃತಜ್ಞನಾಗಿದ್ದೇನೆ. ಯುಕೆ ಮತ್ತು ಭಾರತ ಹಲವು ಸಂಬಂಧಗಳನ್ನು ಹೊಂದಿವೆ.
ಎರಡು ಮಹಾನ್ ಪ್ರಜಾಪ್ರಭುತ್ವ ದೇಶಗಳ ಸಾಧನೆಗಳನ್ನು ನೋಡಲು ನನಗೆ ಕುತೂಹಲವಿದೆ. ಭದ್ರತೆ, ರಕ್ಷಣೆ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ನಾವು ಕೆಲಸ ಮಾಡುತ್ತೇವೆ’ ಎಂದು ರಿಷಿ ಸುನಕ್ ಟ್ವೀಟ್ ಮಾಡಿದ್ದಾರೆ.
Thank you Prime Minister @NarendraModi for your kind words as I get started in my new role.
The UK and India share so much. I'm excited about what our two great democracies can achieve as we deepen our security, defence and economic partnership in the months & years ahead. pic.twitter.com/Ly60ezbDPg
— Rishi Sunak (@RishiSunak) October 27, 2022
ಮತ್ತೊಂದೆಡೆ, ಬ್ರಿಟನ್ ವಿದೇಶಾಂಗ ಸಚಿವ ಜೇಮ್ಸ್ ಕ್ಲೆವರ್ಲಿ ಶುಕ್ರವಾರ ಭಾರತಕ್ಕೆ ಬರಲಿದ್ದಾರೆ. ಅವರು ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ.