ಮಾಹಿತಿ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಅಕ್ಟೋಬರ್ 29) : ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಜಿಲ್ಲಾಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳು, ನೌಕರರು ಭಾವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ 1 ರಂದು ಬೆಳಗ್ಗೆ 7 ಗಂಟೆಗೆ ನಗರದ ಹೊಳಲ್ಕೆರೆ ರಸ್ತೆಯ ಶ್ರೀ ನೀಲಕಂಠೇಶ್ವರ ದೇವಸ್ಥಾನದಿಂದ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದೊಂದಿಗೆ ಮೆರವಣಿಗೆ ಹೊರಡಲಿದೆ.
ಮೆರವಣಿಗೆಯು ವಿವಿಧ ಕಲಾ ತಂಡಗಳು ಹಾಗೂ ಸ್ಥಬ್ದ ಚಿತ್ರಗಳು, ಶಾಲಾ ಮಕ್ಕಳೂಂದಿಗೆ ಗಾಂಧಿ ವೃತ್ತ, ಸ್ಟೇಟ್ ಬ್ಯಾಂಕ್ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಮದಕರಿ ವೃತ್ತ ಮುಖಾಂತರ ಪೊಲೀಸ್ ಕವಾಯತು ಮೈದಾನದಲ್ಲಿ ಅಂತ್ಯಗೊಳ್ಳಲಿದೆ.
ನಂತರ ಬೆಳಗ್ಗೆ 9 ಗಂಟೆಗೆ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಂಜೆ ತ.ರಾ.ಸು. ರಂಗಮಂದಿರದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಜಿಲ್ಲಾ ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ತಿಳಿಸಿದ್ದಾರೆ.