ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ,(ಅ.29) : ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿಯನ್ನು ಚಿತ್ರದುರ್ಗ ನಗರದಲ್ಲಿ ಏರ್ಪಡಿಸಲು ಸರ್ಕಾರದಿಂದ ತೀರ್ಮಾನಿಸಲಾಗಿದೆ. ಜಿಲ್ಲೆಯ ಸಾಂಸ್ಕøತಿಕ ವೈಭವ ಹಾಗೂ ಓಬವ್ವನ ಸಾಹಸ ತ್ಯಾಗ ಬಲಿದಾನಗಳನ್ನು ನಾಡಿಗೆ ಸಾರುವ ನಿಟ್ಟಿನಲ್ಲಿ, ಅದ್ಧೂರಿಯಾಗಿ ಜಯಂತಿಯನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಜ್ಯ ಮಟ್ಟದ ವೀರವನಿತೆ ಓನಕೆ ಓಬವ್ವ ಜಯಂತಿ ಆಚರಣೆ ಕುರಿತು ಜರುಗಿದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನವೆಂಬರ್ 27 ರಂದು ನಗರಕ್ಕೆ ಆಗಮಿಸಲಿದ್ದಾರೆ. ಅಂದು ಅದ್ಧೂರಿಯಾಗಿ ರಾಜ್ಯ ಮಟ್ಟದ ಓಬವ್ವ ಜಯಂತಿ ಕಾರ್ಯಕ್ರಮ ಆಯೋಜನೆ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ. ಸರ್ಕಾರದ ಆದೇಶದಂತೆ ನವೆಂಬರ್ 11 ರಂದು ಜಿಲ್ಲಾಡಳಿತದಿಂದ ಸಾಂಕೇತಿಕವಾಗಿ ಓಬವ್ವ ಜಯಂತಿ ಆಚರಣೆ ಮಾಡಿ ಓಬವ್ವನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಗುವುದು.
ನವೆಂಬರ್ 27 ರಂದು ನಗರದ ವಿಜ್ಞಾನ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ ಜಯಂತಿ ಕಾರ್ಯಕ್ರಮ ಆಯೋಜಿಸಲಾಗುವುದು. ಅಂದು ಓಬವ್ವನ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಜಿಲ್ಲೆಯ ಸಾಂಸ್ಕøತಿಕ ಮಹತ್ವ ಸಾರುವ ಕಲಾ ಪ್ರಕಾರಗಳಿಗೆ ಅವಕಾಶ ಕಲ್ಪಸಿಕೊಡಲಾಗುವುದು. ಜಯಂತಿ ನಿಮಿತ್ತ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಐತಿಹಾಸಿ ಯುದ್ಧದಲ್ಲಿ ಚಿತ್ರದುರ್ಗ ಕೋಟೆಯನ್ನು ಶತ್ರುಗಳೊಂದಿಗೆ ಕಾದಾಡಿ ಕೋಟೆ ರಕ್ಷಿಸಿ ವೀರಮರಣ ಅಪ್ಪಿದ ಓಬವ್ವನ ಸ್ಮಾರಕವನ್ನು ಕೋಟೆಯಲ್ಲಿ ನಿರ್ಮಿಸಲಾಗಿದೆ. ಈ ಸ್ಮಾರಕ್ಕೆ ಜಯಂತಿಯಂದು ಗಣ್ಯರು ನಮನ ಸಲ್ಲಿಸಲಿದ್ದಾರೆ. ಸ್ಮಾರಕದ ಬಳಿ ಓಬವ್ವನ ಭಾವಚಿತ್ರ ಇರಿಸಿ, ಪುಷ್ಪಗಳಿಂದ ಅಲಂಕರಿಸಲು ಪುರತತ್ವ ಇಲಾಖೆ ನೀಡುವಂತೆ ಸಮುದಾಯದ ಮುಖಂಡರು ಸಭೆಯಲ್ಲಿ ಕೋರಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ ರೆಡ್ಡಿ, ಜಿ.ಪಂ.ಯೋಜನಾ ನಿರ್ದೇಶಕ ಕೆ.ಎನ್.ಮಹಾಂತೇಶಪ್ಪ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ, ಸಮುದಾಯದ ಮುಖಂಡರಾದ ಹೆಚ್.ಅಣ್ಣಪ್ಪಸ್ವಾಮಿ, ನಾಗರಾಜ ಕೆ.ಟಿ. ನಲ್ಲಿಕಟ್ಟೆ, ತಿಪ್ಪೇಸ್ವಾಮಿ, ನಿರಂಜನಮೂರ್ತಿ, ದಯಾನಂದ, ರವಿಕುಮಾರ್, ಜಯರಾಮ್, ಸೋಮಶೇಖರ್, ಹುನುಮಂತಪ್ಪ, ಪ್ರಹ್ಲಾದ್, ಪರಮೇಶ್, ಓಬವ್ವನ ವಂಶಸ್ಥರಾದ ಸುರ್ವಣಮ್ಮ ಸೇರಿದಂತೆ ಮತ್ತಿರರು ಇದ್ದರು.