Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತದಲ್ಲಿನ ಪ್ರಮುಖ ದುರಂತಗಳು : ನೂರಾರು ಜೀವಗಳನ್ನು ಬಲಿತೆಗೆದುಕೊಂಡ ಘಟನೆಗಳ ಹಿನ್ನೋಟ…!

Facebook
Twitter
Telegram
WhatsApp

 

ಸುದ್ದಿಒನ್ ವೆಬ್ ಡೆಸ್ಕ್ 

ಗುಜರಾತ್‌ನ ಮೊರ್ಬಿ ಜಿಲ್ಲೆಯಲ್ಲಿ ಮಚ್ಚು ನದಿಯ ಮೇಲಿನ ತೂಗು ಸೇತುವೆ ಕುಸಿದು 140 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾಕಷ್ಟು ಮಂದಿ ನಾಪತ್ತೆಯಾಗಿದ್ದು, ಅಧಿಕಾರಿಗಳು ರಕ್ಷಣಾ ಕ್ರಮ ಕೈಗೊಂಡಿದ್ದಾರೆ. ಈ ದುರಂತ ಘಟನೆಯಿಂದ ಇಡೀ ದೇಶವೇ ಬೆಚ್ಚಿಬಿದ್ದಿದೆ. ಆದರೆ, ಈ ಹಿಂದೆಯೂ ಇಂತಹ ದುರಂತ ಘಟನೆಗಳು ನಡೆದಿವೆ. ನೂರಾರು ಜನರು ಕಾಲ್ತುಳಿತ ಮತ್ತು ನೈಸರ್ಗಿಕ ವಿಕೋಪಗಳಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಮೊರ್ಬಿ ದುರಂತದ ಈ ಸಮಯದಲ್ಲಿ ಅಂತಹ ಕೆಲವು ಘಟನೆಗಳನ್ನು ಮೆಲುಕು ಹಾಕೋಣ. ಇನ್ನೆಂದೂ ಇಂತಹ ದುರಂತಗಳು ಸಂಭವಿಸದಿರಲಿ ಎಂದು ನಾವೆಲ್ಲರೂ ಪ್ರಾರ್ಥಿಸೋಣ.

2022, ಜನವರಿ 1: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ದೇವಸ್ಥಾನದಲ್ಲಿ ಉಂಟಾದ ಕಾಲ್ತುಳಿತದಲ್ಲಿ 12 ಮಂದಿ ಸಾವನ್ನಪ್ಪಿ ಸಾಕಷ್ಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

2016, ಏಪ್ರಿಲ್ 10: ಕೇರಳದ ಕೊಲ್ಲಂ ಬಳಿಯ ದೇವಾಲಯ ಸಂಕೀರ್ಣದಲ್ಲಿ ಭಾರಿ ಸ್ಫೋಟ ಸಂಭವಿಸಿ 110 ಮಂದಿ ಸಾವನ್ನಪ್ಪಿ, 280 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ದೇವಸ್ಥಾನದ ಆಶ್ರಯದಲ್ಲಿ ಸಿಡಿಮದ್ದು ಪ್ರದರ್ಶನ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿತ್ತು.

2016, ಮಾರ್ಚ್ 31:   ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ವಿವೇಕಾನಂದ ಮೇಲ್ಸೇತುವೆ ಕುಸಿದು ಬಿದ್ದು 27 ಮಂದಿ ಸಾವನ್ನಪ್ಪಿ, 80 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

2014, ಅಕ್ಟೋಬರ್ 3: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ದಸರಾ ಆಚರಣೆ ವೇಳೆ ಗಾಂಧಿ ಮೈದಾನದಲ್ಲಿ ರಾವಣ ದಹನದ ವೇಳೆ ಕಾಲ್ತುಳಿತ ಉಂಟಾಗಿ ಒಟ್ಟು 32 ಮಂದಿ ಪ್ರಾಣ ಕಳೆದುಕೊಂಡಿದ್ದರು.

2013, ಅಕ್ಟೋಬರ್ 13 :  ಮಧ್ಯಪ್ರದೇಶದ ದಾತಿಯಾ ಜಿಲ್ಲೆಯ ರತನ್‌ಗಢ ದೇವಸ್ಥಾನದಲ್ಲಿ ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿತ್ತು. ಈ ದುರಂತದಲ್ಲಿ 115 ಮಂದಿ ಸಾವನ್ನಪ್ಪಿ, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ನದಿಯ ಸೇತುವೆ ಕುಸಿಯುವ ಭೀತಿ ಎದುರಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿದ್ದು, ಈ ಕಾಲ್ತುಳಿತಕ್ಕೆ ಕಾರಣವಾಗಿತ್ತು.

2013, ಫೆಬ್ರವರಿ 10: ಕುಂಭಮೇಳದ ವೇಳೆ ಉತ್ತರ ಪ್ರದೇಶದ ಅಲಹಾಬಾದ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿ 36 ಮಂದಿ ಸಾವನ್ನಪ್ಪಿದ್ದರು.

2012, ನವೆಂಬರ್ 19: ಬಿಹಾರದ ರಾಜಧಾನಿ ಪಾಟ್ನಾದ ಗಂಗಾನದಿಯ ಅದಾಲತ್ ಘಾಟ್‌ನಲ್ಲಿ ಚಾಟ್ ಪೂಜೆ ವೇಳೆ ಕಾಲ್ತುಳಿತ ಸಂಭವಿಸಿ 20 ಮಂದಿ ಪ್ರಾಣ ಕಳೆದುಕೊಂಡಿದ್ದರು.

2011, ಜನವರಿ 14: ಕೇರಳದ ಶಬರಿಮಲೆ ದೇವಸ್ಥಾನದಲ್ಲಿ ಕಾಲ್ತುಳಿತದಲ್ಲಿ 106 ಭಕ್ತರು ಪ್ರಾಣ ಕಳೆದುಕೊಂಡರು. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

2010, ಮಾರ್ಚ್ 4:  ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ರಾಮ ಜಾನಕಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿ
63 ಜನರು ಸಾವನ್ನಪ್ಪಿದ್ದರು.

2008, ಸೆಪ್ಟೆಂಬರ್ 30: ರಾಜಸ್ಥಾನದ ಜೋಧಪುರದ ಚಾಮುಂಡಾ ದೇವಿ ದೇವಸ್ಥಾನದಲ್ಲಿ ಬಾಂಬ್ ಸ್ಫೋಟಗೊಂಡು ಕಾಲ್ತುಳಿತಕ್ಕೆ 250 ಜನರು ಸಾವನ್ನಪ್ಪಿದ್ದರು. 160ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

2008, ಆಗಸ್ಟ್ 3: ಹಿಮಾಚಲ ಪ್ರದೇಶದ ಬಿಲಾಸ್‌ಪುರ ಜಿಲ್ಲೆಯ ನೈನಾ ದೇವಿ ದೇವಸ್ಥಾನದಲ್ಲಿ ಭೂಕುಸಿತ ಸಂಭವಿಸಿ ಉಂಟಾದ ಕಾಲ್ತುಳಿತದಲ್ಲಿ 162 ಜನರು ಸಾವನ್ನಪ್ಪಿದ್ದರು. 47 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

2005, ಜನವರಿ 25: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಮಂಧರ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತದಲ್ಲಿ 340 ಭಕ್ತರು ಸಾವನ್ನಪ್ಪಿದ್ದರು. ನೂರಾರು ಮಂದಿ ಗಾಯಗೊಂಡಿದ್ದರು.

1997, ಜೂನ್ 13: ದೆಹಲಿಯ ದೇಸರಾಜ ಧಾನಿಯಲ್ಲಿರುವ ಉಫಾಹರ್ ಥಿಯೇಟರ್‌ನಲ್ಲಿ ಬಾಲಿವುಡ್ ಚಲನಚಿತ್ರ ‘ಬಾರ್ಡರ್’ ಪ್ರದರ್ಶನದ ವೇಳೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿತ್ತು. ಈ ಅಪಘಾತದಲ್ಲಿ 59 ಮಂದಿ ಸಾವನ್ನಪ್ಪಿದ್ದರು. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

1997, ಫೆಬ್ರವರಿ 23:  ಒಡಿಶಾದ ಬರಿಪಾಡಾ ಜಿಲ್ಲೆಯಲ್ಲಿ ನಾಯಕರ ಸಭೆಯಲ್ಲಿ ಬೆಂಕಿ ಕಾಣಿಸಿಕೊಂಡು ಕಾಲ್ತುಳಿತಕ್ಕೆ ಕಾರಣವಾಯಿತು. ಇದರಿಂದ 206 ಮಂದಿ ಪ್ರಾಣ ಕಳೆದುಕೊಂಡು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

1954, ಫೆಬ್ರವರಿ 3: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿತು. ಈ ದುರಂತ ಘಟನೆಯಲ್ಲಿ 800ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಭಾರತದ ಸ್ವಾತಂತ್ರ್ಯದ ನಂತರ ನಡೆದ ಮೊದಲ ಕುಂಭಮೇಳವಾಗಿದ್ದರಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!