ವರದಿ ಮತ್ತು ಫೋಟೋ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ನ.01): ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ 67 ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಕನ್ನಡ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಒಟ್ಟಿಗೆ ಸೇರಿಸಲು ಅನೇಕ ಹಿರಿಯರ ತ್ಯಾಗ ಬಲಿದಾನಗಳಿರುವ ಫಲವಾಗಿ ಇಂದು ನಾವುಗಳೆಲ್ಲಾ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಈ ಹಿಂದೆ ಇದ್ದ ಮೈಸೂರು ಎಂಬ ಹೆಸರನ್ನು ಕರ್ನಾಟಕ ಎಂದು ನಾಮಕರಣ ಮಾಡಿದ್ದು, ಡಿ.ದೇವರಾಜ ಅರಸು. ಹಾಗಾಗಿ ಕನ್ನಡ ರಾಜ್ಯೋತ್ಸವಕ್ಕೂ ಕಾಂಗ್ರೆಸ್‍ಗೂ ಅಗಾಧವಾದ ನಂಟಿದೆ ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎನ್.ಬಿ.ಟಿ.ಜಮೀರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶ್ರೀಮತಿ ಗೀತ ನಂದಿನಿಗೌಡ, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ, ನಗರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸೈಯದ್ ಅಲ್ಲಾಭಕ್ಷಿ, ಎ.ಸಾಧಿಕ್‍ವುಲ್ಲಾ, ಹೆಚ್.ಎಸ್.ಖಾನ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಪಾಪಯ್ಯ, ಕರ್ನಾಟಕ ರಾಜ್ಯ ಟಿಪ್ಪುಸುಲ್ತಾನ್ ಅಭಿಮಾನಿಗಳ ಮಹಾವೇದಿಕೆ ರಾಜ್ಯಾಧ್ಯಕ್ಷ ಟಿಪ್ಪುಖಾಸಿಂಆಲಿ, ಚಾಂದ್‍ಪೀರ್ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.