ಬೆಂಗಳೂರು: ಇಂದು 67ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ. ಈ ಸಂಭ್ರಮದ ಸುದಿನದಲ್ಲಿ ಡಾ ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಪುನೀತ್ ಅವರ ಧರ್ಮಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಈ ಗೌರವವನ್ನು ಸ್ವೀಕರಿಸಿದ್ದಾರೆ. ಸಾವಿರಾರು ಜನರ ಸಮ್ಮುಖದಲ್ಲಿ ಅಪ್ಪುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ.
ರಾಜ್‍ಕುಮಾರ್ ಕುಟುಂಬಸ್ಥರ ಆಸೆಯಂತೆಯೇ ವಿಧಾನಸೌಧದ ಮುಂಭಾಗದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರು ನೀಡಿದ್ದಾರೆ. ಈ ಅದ್ದೂರಿ ಕಾರ್ಯಕ್ರಮದಲ್ಲಿ ಅಣ್ಣಾವ್ರ ಕುಟುಂಬಸ್ಥರು, ಸೂಪರ್ ಸ್ಟಾರ್ ರಜನಿಕಾಂತ್, ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ, ಜೂ. ಎನ್ ಟಿ ಆರ್ ಸೇರಿದಂತೆ ಅಭಿಮಾನಿಗಳು ಸಹ ನೆರೆದಿದ್ದರು.