Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

Facebook
Twitter
Telegram
WhatsApp

 

ಚಿತ್ರದುರ್ಗ,(ನವೆಂಬರ್.03) : ಜಿಲ್ಲೆಯ ಹೊಸದುರ್ಗ ನಗರ ವ್ಯಾಪ್ತಿಯ 20, 22 ಮತ್ತು 23ನೇ ವಾರ್ಡ್‍ಗಳಿಗೆ ಸಂಬಂಧಿಸಿದಂತೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 2 ಅರ್ಜಿ ಸಲ್ಲಿಸಲು ಕೊನೆಯ ದಿನ.

ಹೊಸದುರ್ಗ ನಗರ ವ್ಯಾಪ್ತಿಯ ವಾರ್ಡ್ ನಂ 20, 22 ಮತ್ತು 23 ವಾರ್ಡ್‍ಗಳಲ್ಲಿ ನಿಯೋಜಿ¸ತ ಹೊಸ ನ್ಯಾಯಬೆಲೆ ಅಂಗಡಿಗೆ 524 ಪಡಿತರ ಚೀಟಿಗಳಿವೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ಧೃಡೀಕೃತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನಾಂಕದಿಂದ 30 ದಿನದೊಳಗೆ ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ, ಚಿತ್ರದುರ್ಗ ಇವರಿಗೆ ಸಲ್ಲಿಸಲು ತಿಳಿಸಿದೆ. ನಿಗಧಿತ ಅವಧಿಯ ನಂತರ ಸಲ್ಲಿಕೆಯಾಗುವ ಅಥವಾ ಬೇರೆ ಕಚೇರಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ನಿಗಧಿತ ಅರ್ಜಿ “ಎ” ನಮೂನೆಯನ್ನು ಜಂಟಿ ನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಚಿತ್ರದುರ್ಗ ಕಚೇರಿಯಿಂದ ಪಡೆಯಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಮಾಸ್ ರೇಪಿಸ್ಟ್ : ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ: ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ರಾಜಕೀಯ ಪಕ್ಷಗಳು ಭರ್ಜರಿ ಮತಯಾಚನೆ ನಡೆಸುತ್ತಿವೆ. ರಾಹುಲ್ ಗಾಂಧಿ ಇಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ್ದು, ಗೀತಾ ಶಿವ ರಾಜ್‍ಕುಮಾರ್ ಪರವಾಗಿ ಮತಯಾಚನೆ ಮಾಡಿದ್ದಾರೆ. ಈ ವೇಳೆ

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

error: Content is protected !!