Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಹಾರಾಷ್ಟ್ರದಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಗಾಂಧೀಜಿ ಮರಿ ಮೊಮ್ಮಗ

Facebook
Twitter
Telegram
WhatsApp

 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ನಡೆಯುತ್ತಿದೆ. ಇದೀಗ ಐಕ್ಯತಾ ಯಾತ್ರೆ ಮಹಾರಾಷ್ಟ್ರದಲ್ಲಿ ಸಾಗುತ್ತಿದ್ದು, ರಾಹುಲ್ ಗಾಂಧಿ ಜೊತೆಗೆ ಒಬ್ಬರು ಸ್ಪೆಷಲ್ ವ್ಯಕ್ತಿ ಕೂಡ ಹೆಜ್ಜೆ ಹಾಕಿದ್ದಾರೆ. ಈ ವಿಚಾರವನ್ನು ಫೋಟೋ ಜೊತೆಗೆ ಕಾಂಗ್ರೆಸ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಮಹಾರಾಷ್ಟ್ರದ ಶೆಗಾನ್ ನಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಸಾಗಿತ್ತು. ಈ ವೇಳೆ ಮಹಾತ್ಮ ಗಾಂಧೀಜಿ ಅವರ ಮರಿ ಮೊಮ್ಮಗರಾದ ತುಷಾರ್ ಗಾಂಧಿ ಕೂಡ ಹೆಜ್ಜೆ ಹಾಕಿದ್ದಿದ್ದು ವಿಶೇಷವಾಗಿದೆ. ಇದೊಂದು ಐತಿಹಾಸಿಕ ದಿನವೇ ಎಂದು ಕಾಂಗ್ರೆಸ್ ಹಂಚಿಕೊಂಡಿದೆ.

 

ನವೆಂಬರ್ 7 ರಿಂದ ಮಹಾರಾಷ್ಟ್ರದಲ್ಲಿ ಭಾರತ್ ಜೋಡೋ ಯಾತ್ರೆ ಆರಂಭವಾಗಿದೆ. ಈ ಯಾತ್ರೆಯೂ ಮಹಾರಾಷ್ಟ್ರದ ಹಲವು ಸ್ಥಳಗಳಲ್ಲಿ ಸಂಚರಿಸಿದೆ. ಬಳಿಕ ಶೆಗಾನ್ ತಲುಪಿದ್ದು, ಅಲ್ಲಿ ಲೇಖಕ ಮತ್ತು ಸಾಮಾಜಿಕ ಕಾರ್ಯಕರ್ತ ತುಷಾರ್ ಗಾಂಧಿ ಜೊತೆಯಾಗಿದ್ದಾರೆ. ಈ ಮುಂಚೆಯೇ ತುಷಾರ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದರು. ಅದರಂತೆ ಇಂದು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಧಾರಾಕಾರ ಮಳೆಗೆ ಕೋಲಾರದಲ್ಲಿ ಎರಡೂವರೆ ಎಕರೆ ಬಾಳೆ ನಾಶ..!

ಕೋಲಾರ: ಮಳೆಯನ್ನು ಕಂಡು ರೈತ ಅದೆಷ್ಟೋ ವರ್ಷಗಳು ಆಗಿತ್ತೇನೋ ಎಂಬ ಭಾವನೆ ಈ ಬಾರಿಯ ಬಿಸಿಲು ನೋಡಿ ಮೂಡಿತ್ತು. ಆದರೆ ವರುಣರಾಯ ಕೃಪೆ ಏನೋ ತೋರಿದ್ದಾನೆ. ನಿನ್ನೆಯಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇನ್ಮುಂದೆ ಉತ್ತಮ ಮಳೆಯಾಗುವ

30 ವರ್ಷದ ಹಳೇ ಕಥೆ ಹೇಳಿದ ಶಿವರಾಮೇಗೌಡ : ಇಂಗ್ಲೆಂಡ್ ನಲ್ಲೂ ತಗಲಾಕಿಕೊಂಡಿದ್ರಂತೆ ರೇವಣ್ಣ..!

ಮಂಡ್ಯ: ಅಬ್ಬಬ್ಬಾ.. ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿಚಾರಗಳು ದಿನೇ‌ ದಿನೇ ಒಂದೊಂದು ವಿಚಾರಗಳು ಬೆಳಕಿಗೆ ಬರುತ್ತಿವೆ. ಕಳೆದ ಮೂವತ್ತು ವರ್ಷಗಳ ಹಿಂದೆಯೂ ಇಂಥದ್ದೊಂದು ಘಟನೆ ಅದರಲ್ಲೂ ಇಂಗ್ಲೆಂಡ್ ನಲ್ಲಿ‌ ನಡೆದಿತ್ತಂತೆ. ಈ

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

error: Content is protected !!