ಉಡುಪಿ: ಈಗ ಇಡೀ ಪ್ರಪಂಚವೇ ಭಾರತದ ಮಾತು ಕೇಳುವ ಸ್ಥಿತಿ ನಿರ್ಮಾಣವಾಗಿದೆ. ಕಾಲು ಕೆರೆದುಕೊಂಡು ನಾವೂ ಯಾರ ಜೊತೆಗೂ ತಗಾದೆ ಶುರು ಮಾಡುವುದಿಲ್ಲ. ಆದ್ರೆ ಭಾರತದ ತಂಟೆಗೆ ಬಂದ್ರೆ ಸುಮ್ಮನೆ ಇರುವುದಿಲ್ಲ. ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಉಡುಪಿಯಲ್ಲಿ ಮಣಿಪಾಲ ಮಾಹೆ ವಿವಿಯಲ್ಲಿ ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ರಾಜನಾಥ್ ಸಿಂಗ್, ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ್ದು, ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವೂ ಯಾರ ಜೊತೆಗೂ ಜಗಳಕ್ಕೆ ಹೋಗುವುದಿಲ್ಲ. ಆದ್ರೆ ಭಾರತದ ತಂಟೆಗೆ ಬಂದ್ರೆ ಮುಖಮೂತಿ ನೋಡುವುದಿಲ್ಲ ಎಂದಿದ್ದಾರೆ.
ಆರ್ಥಿಕತೆಯ ವಿಚಾರದಲ್ಲಿ ಭಾರತ ಸದೃಢವಾಗಲಿದೆ. 2047ರಷ್ಟರಲ್ಲಿ ಭಾರತದ ಮೊದಲ ಸ್ಥಾನದಲ್ಲಿ ನಿಲ್ಲಲಿದೆ. ಗ್ಲೋಬಲ್ ಸಿಟಿಜನ್ ನಿರ್ಮಿಸಲು ಎನ್ ಇ ಪಿ ಜಾರಿಗೆ ತಂದಿದ್ದೇವೆ. ಪ್ರಧಾನಿ ಮೋದಿ ಅವರು ದೇಶದ ಅಭಿವೃದ್ದಿಗಾಗಿ ಸಾಕಷ್ಟು ಶ್ರಮ ಹಾಕುತ್ತಿದ್ದಾರೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.