ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
12 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಸುಮೊ ನಿಯಂತ್ರಣ ತಪ್ಪಿ 700 ಮೀಟರ್ ಆಳದ ಕಂದಕಕ್ಕೆ ಬಿದ್ದಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದ 12 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮೃತ ದೇಹಗಳನ್ನು ಕಣಿವೆಯಿಂದ ಮೇಲೆತ್ತಲಾಯಿತು. ಜೋಶಿಮಠದಿಂದ ಕಿಮಣ ಗ್ರಾಮಕ್ಕೆ ಹೋಗುತ್ತಿದ್ದಾಗ ಪಲ್ಲಾ ಜಾಖೋಲ್ ಎಂಬಲ್ಲಿ ವಾಹನ ಅಪಘಾತಕ್ಕೀಡಾಗಿದೆ.
ಮೃತ 12 ಮಂದಿಯಲ್ಲಿ 10 ಪುರುಷರು ಮತ್ತು ಇಬ್ಬರು ಮಹಿಳೆಯರು ಇದ್ದರು. 700 ಮೀಟರ್ ಆಳದ ಕಷಿವೆಗೆ ಬಿದ್ದ ಟಾಟಾ ಸುಮೋ ತುಂಡಾಗಿದೆ. ಪ್ರಯಾಣಿಕರ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿದ್ದವು.
ಈ ಘಟನೆ ಬಗ್ಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.