ಬೆಳಗಾವಿ : ಕುಮಾರಸ್ವಾಮಿ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು. ಸಿಡಿ ಕೇಸ್ ನಿಂದಾಗಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮತ್ತೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಇದರ ನಡುವೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಬಂದಿದ್ದು ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ಮಾತನಾಡಿರುವ ರಮೇಶ್ ಜಾರಕಿಹೊಳಿ, ಕುಮಾರಸ್ವಾಮಿ ನನ್ನ ಜೊತೆ ಮಾತನಾಡಿರುವುದು ಸತ್ಯ. ಆದ್ರೆ ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಅದು ಕುಮಾರಸ್ವಾಮಿ ಅವರಿಗೂ ತಿಳಿಸಿದ್ದೇನೆ. ಇಬ್ಬರದ್ದು ಒಂದೇ ಉದ್ದೇಶವಾಗಿರುವ ಕಾರಣ, ನಾನು ಬಿಜೆಪಿಯಲ್ಲಿ ಇದ್ದುಕೊಂಡೇ ಮಾಡುತ್ತೇನೆ. ಅವರು ಜೆಡಿಎಸ್ ನಲ್ಲಿ ಇದ್ದುಕೊಂಡೆ ಮಾಡುತ್ತಾರೆ.
ಇಬ್ಬರಿಗೂ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಎಂಬ ಉದ್ದೇಶವಿದೆ. ಹೀಗಾಗಿ ಅದಕ್ಕಾಗಿ ಶ್ರಮಿಸುತ್ತೇವೆ. 2023ಕ್ಕೆ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು. ಅದಕ್ಕಾಗಿ ಕುಮಾರಣ್ಣನಿಗೆ ಒಂದು ಹೇಳಿದ್ದೀನಿ. ನಾನಂತು ಬಿಜೆಪಿ ಬಿಟ್ಟು ಎಲ್ಲಿಯೂ ಬರುವುದಿಲ್ಲ. ನಿನ್ನ ಉದ್ದೇಶ ನೀನು ಮಾಡು, ನನ್ನ ಉದ್ದೇಶ ನಾನು ಮಾಡುತ್ತೀನಿ ಎಂದಿದ್ದಾರೆ.