ಬೆಂಗಳೂರು: ಚಿಲುಮೆ ಸಂಸ್ಥೆ ಮತದಾರರ ದತ್ತಾಂಶವನ್ನು ಸಂಗ್ರಹಿಸಲಾಗುತ್ತಿದೆ, ಹಲವರ ಹೆಸರುಗಳನ್ನು ಡಿಲಿಟ್ ಮಾಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿತ್ತು. ಇದರ ಬೆನ್ನಲ್ಲೆ ಚಿಲುಮೆ ಸಂಸ್ಥೆಯವರನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಸದ್ಯದ ತನಿಖೆಯ ಪ್ರಕಾರ ಕಾಂಗ್ರೆಸ್ ಮಾಡಿದ ಆರೋಪಕ್ಕೆ ತಕ್ಕ ಸಾಕ್ಷಿಗಳು ಸಿಗುತ್ತಿವೆ.
ಇದೀಗ ಈ ಸಂಬಂಧ ಮತ್ತೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಇಂದು ಜಂಟಿ ಸುದ್ದಿಗೋಷ್ಟಿ ನಡೆಸಿದೆ. ಸುದ್ದಿಗೋಷ್ಟಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ್ ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಸಿಎಂ ಬೊಮ್ಮಾಯಿ ಅವರೇ ಈ ಪ್ರಕರಣದ ಕಿಂಗ್ ಪಿನ್ ಆಗಿದ್ದಾರೆ. ಇದುವರೆಗೂ ಸಿಎಂ ವಿರುದ್ಧ ಎಫ್ಐಆರ್ ದಾಖಲಾಗಿಲ್ಲ. ಬೊಮ್ಮಾಯಿ ಅವರೇ ಬೆಂಗಳೂರು ಉಸ್ತುವಾರಿಯಾಗಿದ್ದಾರೆ. ಪ್ರತಿ ಗಂಟೆಗೂ ಹೆಚ್ಚೆಚ್ಚು ದಾಖಲೆಗಳು ಸಿಗುತ್ತಿವೆ. ಬಿಬಿಎಂಪಿ ಅಧಿಕಾರಿಯ ವಿರುದ್ಧವೂ ಇನ್ನು ಯಾಕೆ ಕ್ರಮ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇದೆ ವೇಳೆ ಸಿದ್ದರಾಮಯ್ಯ ಕೂಡ ಈ ವಿಚಾರವನ್ನು ಪ್ರಸ್ತಾಪಿಸಿದ್ದು, ಸಿಎಂ ಆದವರು ಯಾವ ಹಗರಣವನ್ನು ಬೇಕಾದರೂ ಮಾಡಬಹುದಾ..? ಬೆಂಗಳೂರು ಉಸ್ತುವಾರಿಯಾಗಿದ್ದುಕೊಂಡು ಇಂಥದ್ದೊಂದು ಅಕ್ರಮಕ್ಕೆ ಕಾರಣವಾಗಿರುವ ಬೊಮ್ಮಾಯಿ ಅವರಿಗೆ ತಮ್ಮ ಹುದ್ದೆಯಲ್ಲಿ ಉಳಿಯುವ ನೈತಿಕತೆ ಇರುತ್ತದೆಯಾ..? ಎಂದು ರಾಜೀನಾಮೆಗೆ ಒತ್ತಾಯಿಸಿದ್ದಾರೆ.