ಬೆಂಗಳೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಭಯಾನಕ ವಿಚಾರಗಳು ಬೆಳಕಿಗೆ ಬರುತ್ತಿವೆ. ಅದರಲ್ಲೂ ಇಂದು ಬೆಳಕಿಗೆ ಬಂದ ವಿಚಾರ ಎಲ್ಲರನ್ನು ಮೈ ನಡುಗಿಸುವಂತೆ ಮಾಡಿದೆ. ಪಾಪಿಗಳು ಹಿಂದೂ ದೇವಾಲಯಗಳನ್ನೇ ಟಾರ್ಗೆಟ್ ಮಾಡಿದ್ದರಂತೆ. ಈ ಎಲ್ಲಾ ಬೆಳವಣಿಗೆಗಳ ನಂತರ ಈ ಕೇಸನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಲಾಗಿದೆ.
ಈ ಸಂಬಂಧ ಮಾಹಿತಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಕಂಕನಾಡಿ ಸಮೀಪ ನಡೆದ ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಎನ್ಐಎಗೆ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಈ ಸಂಬಂಧ ಆಜ್ಞೆ ಕೂಡ ಹೊರಡಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಿದ ಸಾಕ್ಷ್ಯಾಧಾರಗಳ ಮೇಲೆ ರಾಜ್ಯ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.