ನವದೆಹಲಿ: ಸಾವರ್ಕರ್ ಬ್ರಿಟಷರಿಗೆ ಸಹಾಯ ಮಾಡಿದವರು ಎಂದು ಕಾಂಗ್ರೆಸ್ ಆರೋಪ ಮಾಡುತ್ತಲೇ ಬಂದಿದೆ. ಇತ್ತಿಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಸಾವರ್ಕರ್ ಬಗ್ಗೆ ಮಾತನಾಡಿದ್ದರು. ಇದನ್ನು ಖಂಡಿಸಿರುವ ಅಖಿಲ ಭಾರತೀಯ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸ್ವಾಮಿ ಚಕ್ರಪಾಣಿ, ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಪತ್ರದಲ್ಲಿ, ಕಾಂಗ್ರೆಸ್ ಕಚೇರಿಯ ಮುಂದೆ ಸಾವರ್ಕರ್ ಅವರ ಪ್ರತಿಮೆಯನ್ನು ಸ್ಥಾಪಿಸಲು ಹಿಂದೂ ಮಹಾಸಭಾ ನಿರ್ಧರಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಾವರ್ಕರ್ ಅವರನ್ನು ಮತ್ತೆ ಮತ್ತೆ ಅವಮಾನಿಸಿದ್ದಾರೆ. ಭಾರತದ ಮಹಾನ್ ಸ್ವಾತಂತ್ರ್ಯ ಹೋರಾಟಗಾರನನ್ನು ಅವಮಾನಿಸಿ, ಕಾಂಗ್ರೆಸ್ ಅಪರಾಧ ಮಾಡಿದೆ.
ರಾಹುಲ್ ಗಾಂಧಿ ಮಾನಸಿಕ ಅಸ್ವಸ್ಥರಾಗಿದ್ದು, ಆಗ್ರಾದಲ್ಲಿ ಅವರಿಗೆ ಮಾನಸಿಕ ಚಿಕಿತ್ಸೆ ಕೊಡಿಸಬೇಕಿದೆ. ಈ ಹಿನ್ನೆಲೆ ಸರ್ಕಾರವೂ ತಕ್ಷಣವೇ ರಾಹುಲ್ ಗಾಂಧಿ ಅವರ ರಾಜಕೀಯ ಚಟುವಟಿಕೆಯನ್ನು ನಿಷೇಧಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.