ಮಂಡ್ಯ: ಇಷ್ಟು ವರ್ಷ ಮಂಡ್ಯದಲ್ಲಿ ಬಿಜೆಪಿಯೆಂದರೆ ಅಷ್ಟಕ್ಕಷ್ಟೆ. ಆದ್ರೆ ಈ ಬಾರಿ ಗೆಲುವನ್ನು ತಮ್ಮದಾಗಿಸಿಕೊಳ್ಳುವುದಕ್ಕೆ ಸತತ ಪ್ರಯತ್ನ ನಡೆಸುತ್ತಿದೆ. ಕೆ ಆರ್ ಪೇಟೆ ಉಪಚುನಾವಣೆಯ ಬಳಿಕ ಬಿಜೆಪಿ ಕಾರ್ಯಕರ್ತರು ಆ್ಯಕ್ಟೀವ್ ಆಗಿದ್ದಾರೆ. ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಗಳು ಹೆಚ್ಚಾಗುತ್ತಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಸಿ ಪಿ ಉಮೇಶ್ ಕೂಡ ಆಕಾಂಕ್ಷಿಯಾಗಿದ್ದು, ಡಿಸಿಸಿ ಬ್ಯಾಂಕ್ ಅಧ್ಯಕ್ಷರೂ ಆಗಿದ್ದಾರೆ. ಈ ಮೂಲಕ ಬ್ಯಾಂಕ್ ಅನ್ನು ಯಶಸ್ವಿಯಾಗಿ ತೆಗದುಕೊಂಡು ಹೋಗಿದ್ದಾರೆ. ಜೊತೆಗೆ ಸಚಿವರಾದ ಅಶ್ವತ್ಥ್ ನಾರಾಯಣ್, ಸಚಿವ ಸೋಮಶೇಖರ್ ಸೇರಿದಂತೆ ಹಲವು ಪ್ರಭಾವಿ ನಾಯಕರ ಜೊತೆಗೆ ಆತ್ಮೀಯವಾಗಿದ್ದಾರೆ.
ಚಂದಗಾಲು ಶಿವಣ್ಣ, ಡಾ.ಲಕ್ಷ್ಮೀ ಅಶ್ವಿನ್‌ಗೌಡ, ಹೆಚ್.ಆರ್.ಅರವಿಂದ್, ಅಶೋಕ್ ಜಯರಾಂ ಸೇರಿದಂತೆ ಅನೇಕರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ನಾಗಮಂಗಲದಲ್ಲಿ ಇನ್ನು ಪೈಪೋಟಿ ಶುರುವಾಗಿಲ್ಲ. ಫೈಟರ್ ರವಿ ಅವರು ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಉಳಿದ ಕ್ಷೇತ್ರಗಲ್ಲಿ ಈ ಬಾರಿ ಬಿಜೆಪಿ ಉಳಿದ ಪಕ್ಷಗಳಿಗೆ ಪ್ರಬಲ ಪೈಪೋಟಿ ಕೊಡುವುದರಲ್ಲಿ ಅನುಮಾನವೇ ಇಲ್ಲ.