ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಕ್ಕಾಗಿ ಸರ್ಕಾರಿ ಶಾಲೆಯ ಶಿಕ್ಷಕ ರಾಜೇಶ್ ಕನ್ನೋಜೆ ಅವರನ್ನು ಅಮಾನತುಗೊಳಿಸಲಾಗಿದೆ.
ಕನಸ್ಯ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕ ರಾಜೇಶ್ ಕನ್ನೋಜೆ ಅವರು ಕೆಲಸದ ನಿಮಿತ್ತ ರಜೆ ಕೋರಿದ್ದರು. ಆದರೆ ಅವರು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಇಲಾಖೆಗೆ ತಿಳಿದುಬಂದಿದೆ.
ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಯಾತ್ರೆಯಲ್ಲಿ ಪಾಲ್ಗೊಂಡ ಒಂದು ದಿನದ ನಂತರ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ.
ಇದರೊಂದಿಗೆ ಮಧ್ಯಪ್ರದೇಶ ರಾಜ್ಯ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ಕೆಕೆ ಮಿಶ್ರಾ ಅವರು ಟ್ವಿಟರ್‌ನಲ್ಲಿ, ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರವು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಶಾಖೆಗಳಲ್ಲಿ ಮಾತ್ರ ಉದ್ಯೋಗಿಗಳಿಗೆ ಭಾಗವಹಿಸಲು ಅವಕಾಶ ನೀಡುತ್ತಿದ್ದಾರೆ ಎಂದು ದೂರಿದ್ದಾರೆ.
ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಯಾತ್ರೆಯನ್ನು ಪ್ರಾರಂಭಿಸಲಾಯಿತು. ನಂತರ ದಕ್ಷಿಣ ರಾಜ್ಯಗಳಾದ ಕೇರಳ, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ, ಮಹಾರಾಷ್ಟ್ರ ಮತ್ತು ಈಗ ಮಧ್ಯಪ್ರದೇಶದ ಮೂಲಕ ಪ್ರಯಾಣಿಸಿ
ಇದೇ ಭಾನುವಾರ ರಾಜಸ್ಥಾನ ಪ್ರವೇಶಿಸಲಿದೆ.