Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಸೆಂಬರ್ 27 ರಂದು ಭದ್ರೆಗೆ ಜನರ ಬಾಗಿನ ಸಮರ್ಪಣೆ : ಜಿ.ಎಸ್.ಉಜ್ಜಿನಪ್ಪ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಡಿ.04) : ಹಿರಿಯೂರಿನ ವಾಣಿವಿಲಾಸ ಸಾಗರ 89 ವರ್ಷಗಳ ನಂತರ ಭರ್ತಿಯಾಗಿರುವುದಕ್ಕೆ ಭದ್ರಾ ನೀರು ಹರಿದು ಬಂದಿರುವುದೇ ಕಾರಣ ಎನ್ನುವ ಸಂಭ್ರಮಕ್ಕಾಗಿ ಡಿ.27 ರಂದು ಭದ್ರೆಗೆ ಜನರ ಬಾಗಿನ ಸಮರ್ಪಣೆ ಮಾಡಲಾಗುವುದೆಂದು ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಂಚಾಲಕ ಜಿ.ಎಸ್.ಉಜ್ಜಿನಪ್ಪ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ನೀರಾವರಿ ಹೋರಾಟ ಸಮಿತಿ ಅಧ್ಯಕ್ಷರಾದ ಪಿ.ಕೋದಂಡರಾಮಯ್ಯ, ಪ್ರಧಾನ ಸಂಚಾಲಕ ಡಾ.ಬಂಜಗೆರೆ ಜಯಪ್ರಕಾಶ್, ಸೇರಿದಂತೆ ರೈತರು, ಕಾರ್ಮಿಕರು, ವಿವಿಧ ಸಂಘಟನೆಗಳು, ಹೋರಾಟಗಾರರನ್ನು ಆಹ್ವಾನಿಸಿ ಬಾಗಿನ ಅರ್ಪಿಸಲಾಗುವುದು. ಜಿಲ್ಲೆಯ ವಿವಿಧೆಡೆಗಳಿಂದ ಮೂರು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಭಧ್ರಾ ಮೇಲ್ದಂಡೆ ಯೋಜನೆಗಾಗಿ ಭೂಮಿ ಸ್ವಾಧೀನಪಡಿಸಿಕೊಂಡಿರುವವರಿಗೆ ಇನ್ನು ಪರಿಹಾರ ಸಿಕ್ಕಿಲ್ಲ. ಹಾಗಾಗಿ ಭೂಮಿ ಕಳೆದುಕೊಂಡಿರುವ ಎಲ್ಲರಿಗೂ ಪರಿಹಾರ ನೀಡಬೇಕು. ಹಿರಿಯೂರಿನಿಂದ ಆರಂಭಗೊಳ್ಳುವ ಜಾಥ ಹೊಸದುರ್ಗ, ಹೊಳಲ್ಕೆರೆ, ಚಿತ್ರದುರ್ಗ, ಚಳ್ಳಕೆರೆ, ಮೊಳಕಾಲ್ಮುರು, ನಾಯಕನಹಟ್ಟಿಯ ಗುರುತಿಪ್ಪೇರುದ್ರಸ್ವಾಮಿಯ ಸನ್ನಿಧಿಯಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.

ಚಳ್ಳಕೆರೆ ಬಸವರಾಜ್ ಮಾತನಾಡಿ ಎಲ್ಲರ ಹೋರಾಟದಿಂದ ಹಿರಿಯೂರಿನ ವಾಣಿವಿಲಾಸಸಾಗರಕ್ಕೆ ಭದ್ರೆಯಿಂದ ನೀರು ಹರಿದು ಬಂದಿದೆ. ಅದಕ್ಕಾಗಿ ಇದೇ ತಿಂಗಳ 27 ರಂದು ಜನರ ಬಾಗಿನವನ್ನು ವಾಣಿವಿಲಾಸಸಾಗರಕ್ಕೆ ಅರ್ಪಿಸಲಾಗುವುದು. ಇದರಲ್ಲಿ ಯಾರೊಬ್ಬರ ಸ್ವಾರ್ಥವಿಲ್ಲ. ಜಿಲ್ಲೆಗೆ ನೀರು ಹರಿಯಲಿ ಎನ್ನುವುದು ಎಲ್ಲರ ಉದ್ದೇಶ ಎಂದು ಹೇಳಿದರು.

ನರೇನಹಳ್ಳಿ ಅರುಣ್‍ಕುಮಾರ್ ಮಾತನಾಡುತ್ತ 25 ವರ್ಷಗಳ ನಿರಂತರ ಹೋರಾಟದ ಫಲವಾಗಿ ಜಿಲ್ಲೆಗೆ ಭದ್ರೆ ನೀರು ಬಂದಿದೆ. ಯೋಜನೆಗಾಗಿ ಸ್ವಾಧೀನಪಡಿಸಿಕೊಂಡಿರುವ ಭೂ ಮಾಲೀಕರಿಗೆ ಪರಿಹಾರ ಕೊಡಿ. ನೀರಿಗಾಗಿ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಮುಂದಿನ ದಿನಗಳಲ್ಲಿ ಜಾಥ, ಸಂವಾದಗಳನ್ನು ನಡೆಸಿ ಹೋರಾಟವನ್ನು ಮತ್ತಷ್ಟು ಗಟ್ಟಿಗೊಳಿಸಲಾಗುವುದೆಂದರು.

ರಾಜ್ಯದ ಮುಖ್ಯಮಂತ್ರಿ ಬಳಿ ನಿಯೋಗ ಹೋಗಿ ಜಿಲ್ಲೆಯ ಎಲ್ಲಾ ಕೆರೆಗಳನ್ನು ಸಂರಕ್ಷಿಸುವ ಕುರಿತು ಚರ್ಚಿಸಲಾಗುವುದು. ಇದಕ್ಕೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ಹೇಳಿದರು.

ಈ ಮಹೇಶ್‍ಬಾಬು, ಕೂನಿಕೆರೆ ರಾಮಣ್ಣ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರೇವಣ್ಣ ಬಂಧನದ ಬೆನ್ನಲ್ಲೇ ದೂರು ನೀಡಲು ಬಂದ ಮೂವರು ಸಂತ್ರಸ್ತೆಯರು : ಮತ್ತಷ್ಟು ಸಂಕಷ್ಟ..!

ಬೆಂಗಳೂರು: ಮಹಿಳೆಯನ್ನು ಕಿಡ್ನ್ಯಾಪ್ ಮಾಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೊಬ್ಬರು ದೂರು ನೀಡಿರುವುದು ಹಾಗೂ ಇನ್ನೊಬ್ಬ ಸಂತ್ರಸ್ತೆಯ ಮಗ ಕಿಡ್ನ್ಯಾಪ್ ಪ್ರಕರಣದಲ್ಲಿ ದೂರು

ಭಾಷಣದಲ್ಲಿ ಯಡವಟ್ಟು : ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಕುಮಾರಸ್ವಾಮಿ ದೂರು.. ಎಫ್ಐಆರ್ ದಾಖಲು..!

ಹುಬ್ಬಳ್ಳಿ: ಧಾರವಾಡ ಲೋಕಸಭಾ ಚುನಾವಣಾ ಕ್ಷೇತ್ರಕ್ಕೆ ಬಿಜೆಪಿ ಅದ್ಯಾವಾಗ ಮತ್ತೆ ಪ್ರಹ್ಲಾದ್ ಜೋಶಿ ಅವರಿಗೇನೆ ಟಿಕೆಟ್ ಕೊಟ್ಟಿತೇ ಅಂದಿನಿಂದಾನೇ ದಿಂಗಾಲೇಶ್ವರ ಸ್ವಾಮೀಜಿಗೆ ಬೇಸರ ಉಂಟಾಗಿತ್ತು. ಅಭ್ಯರ್ಥಿಯನ್ನು ಬದಲಾಯಿಸಿ ಎಂದು ಮನವಿ ಕೂಡ ಅಭ್ಯರ್ಥಿಯ ಬದಲಾವಣೆ

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

error: Content is protected !!