ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಏಳನೇ ಬಾರಿಗೂ ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಕರ್ನಾಟಕದ ಮೇಲೂ ಗುಜರಾತ್ ಚುನಾವಣೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್ನು ಗುಜರಾತ್ ನಲ್ಲಿ ಅನುಸರಿದ ಮಾದರಿಯನ್ನೇ ಕರ್ನಾಟಕದಲ್ಲೂ ಅನುಸರಿಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಹೇಳಿದಂತೆ ಕಾಣುತ್ತಿದೆ.
ಮುಂಬರುವ ಚುನಾವಣೆ ಬಗ್ಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಅತಿ ಹೆಚ್ಚು ವಯಸ್ಸಾದ ನಾಯಕರಿಗೆ ಟಿಕೆಟ್ ಕೊಡುವ ಬಗ್ಗೆ ಚಿಂತನೆ ಮಾಡಬೇಕಿದೆ. ಹಲವು ಬಾರಿ ಗೆದ್ದಿದ್ದಾರೆ ಎಂಬ ಕಾರಣಕ್ಕೆ ಟಿಕೆಟ್ ಬೇಡ ಎಂದಿದ್ದಾರೆ. ಕರ್ನಾಟಕದಲ್ಲೂ ಹೊಸಬರಿಗೆ ಟಿಕೆಟ್ ಕೊಡುವ ಮಾದರಿ ಅನ್ವಯವಾಬೇಕಿದೆ ಎಂದು ಗುಜರಾತ್ ಮಾದರಿಯ ಬಗ್ಗೆ ಪರೋಕ್ಷವಾಗಿ ತಿಳಿಸಿದ್ದಾರೆ.
ಹಿರಿಯರಿಗೆ ಪರಿಷತ್ ನಲ್ಲಿ ಅವಕಾಶ ನೀಡದಲಿ. ಆದರೆ ಚುನಾವನೆಯಲ್ಲಿ ಯುವಕರಿಗೆ ಟಿಕೆಟ್ ನೀಡಲಿ. ಹೊಸಬರಿಗೆ ಅವಕಾಶ ನೀಡಬೇಕಿದೆ. ಇದನ್ನು ಪಕ್ಷದ ವೇದಿಕೆಯಲ್ಲೂ ಸಾಕಷ್ಟು ಸಾರಿ ಹೇಳಿದ್ದೇನೆ. ನಾವೂ ಇನ್ನೂ ಹಳೆ ಮಾದರಿಯನ್ನೇ ಅನುಸರಿಸುತ್ತಿದ್ದೇವೆ. ಅದು ಬದಲಾಗಬೇಕಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.