ನವದೆಹಲಿ: ಈ ಬಾರಿ ದೆಹಲಿಯಲ್ಲಿ ಎಎಪಿ ಸರ್ಕಾರ ಇತಿಹಾಸ ಸೃಷ್ಟಿಸಿದೆ. ಬಿಜೆಪಿ ತೆಕ್ಕೆಯಿಂದ ಪಾಲಿಕೆಯ ಅಧಿಕಾರವನ್ನು ಕಿತ್ತುಕೊಂಡು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಈ ಬೆನ್ನಲ್ಲೆ ದೆಹಲಿ ಸಿಎಂ ಕೇಜ್ರಿವಾಲ್ ಬಿಜೆಪಿ ಮೇಲೆ ಗಂಭೀರ ಆರೋಪ ಮಾಡದ್ದಾರೆ.
ಪಾಲಿಕೆಯ ಹತ್ತು ಸದಸ್ಯರನ್ನು ಕೊಂಡುಕೊಳ್ಳಲು ಬಿಜೆಪಿ 100 ಕೋಟಿಯ ಆಮಿಷವೊಡ್ಡಿದೆ. ಪಾಲಿಕೆ ಸದಸ್ಯರ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಗಂಭೀರ ಆರೋಪ ಮಾಡಿದೆ. ಈ ಸಂಬಂಧ ಮಾತನಾಡಿರುವ ಆಪ್ ಪಕ್ಷದ ಹಿರಿಯ ಮುಖಂಡ ಸಂಜಯ್ ಸಿಂಗ್, ಎಂಸಿಡಿ ಎಲೆಕ್ಷನ್ ನಲ್ಲಿ ಬಿಜೆಪಿ ನಮಗಿಂತ 30 ಸ್ಥಾನ ಕಮ್ಮಿ ಇದೆ. ಕಳೆದ ಬಾರಿಯ ಚುನಾವಣೆಗೆ ಹೋಲಿಕೆ ಮಾಡಿದರೆ ಒಟ್ಟು 80 ಸ್ಥಾನಗಳನ್ನು ಬಿಜೆಪಿ ಕಳೆದುಕೊಂಡಿದೆ. ತನ್ನ ಹಳೆಯ ಚಾಳಿಯನ್ನು ಮುಂದುವರೆಸಿದ್ದು, ನಮ್ಮ 10 ಪಾಲಿಕೆ ಸದಸ್ಯರನ್ನು ಖರೀದಿಸಲು 100 ಕೋಟಿ ಖರ್ಚು ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.