Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಸ್ವಾರ್ಥ ಸೇವೆಯ ಜೊತೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳಿ : ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣಪ್ಪ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಡಿ.10): ನಿಸ್ವಾರ್ಥ ಸೇವೆಯ ಜೊತೆ ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳುವಂತೆ ಪ್ರೌಢಶಾಲಾ ಶಿಕ್ಷಕರುಗಳಿಗೆ ಹಾಗೂ ಕಿರಿಯ ರೆಡ್‍ಕ್ರಾಸ್ ಕೌನ್ಸಿಲರ್‍ಗಳಿಗೆ ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣಪ್ಪ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ವೈ.ಆರ್.ಆದಿಶೇಷ ರೋಟರಿ ಬಾಲಭವನದಲ್ಲಿ ಪ್ರೌಢಶಾಲಾ ಶಿಕ್ಷಕರಿಗೆ ಹಾಗೂ ಕಿರಿಯ ರೆಡ್‍ಕ್ರಾಸ್ ಕೌನ್ಸಿಲ್‍ರಗಳಿಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಗಾಟಿಸಿ ಮಾತನಾಡಿದರು.

ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ರಕ್ತದಾನ, ಉಚಿತ ಆರೋಗ್ಯ ತರಬೇತಿ ಶಿಬಿರಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರುತ್ತಿದೆ. ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿರುವ ನೀವುಗಳು ಸಮಾಜ ಸೇವೆಯ ಮೂಲಕ ಪರೋಪಕಾರದ ಗುಣ ಬೆಳೆಸಿಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಂಗನಾಥ್ ಮಾತನಾಡಿ ವೈಯಕ್ತಿಕ ಸ್ವಚ್ಚತೆ, ಪರಿಸರ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದರಿಂದ ರೋಗಗಳು ಒಬ್ಬರಿಂದ ಮತ್ತೊಬ್ಬರಿಗೆ ಹರಡುವುದು ಕಡಿಮೆಯಾಗುತ್ತದೆ. ಮಾರಕ ರೋಗಗಳ ಕುರಿತು ಯುವಜನತೆಯಲ್ಲಿ ಅರಿವು ಮೂಡಿಸುತ್ತ ರಕ್ತದಾನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು.

ರಾಷ್ಟ್ರೀಯ ತರಬೇತುದಾರ ಡಾ.ವಿ.ಎಲ್.ಎಸ್.ಕುಮಾರ್ ಪ್ರಥಮ ಚಿಕಿತ್ಸೆ ಸಿ.ಪಿ.ಆರ್.ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಉಪನ್ಯಾಸ ನೀಡಿದರು.

ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ನೀಲಕಂಠಾಚಾರ್, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಜಯಣ್ಣ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ರಾಜ್ಯ ಕಿರಿಯ ರೆಡ್‍ಕ್ರಾಸ್ ಉಪ ಸಮಿತಿಯ ಅರುಣ್‍ಕುಮಾರ್, ಶ್ರೀಮತಿ ಗಾಯತ್ರಿ ಶಿವರಾಂ, ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ ಕಾರ್ಯದರ್ಶಿ ಮಜಹರ್‍ಉಲ್ಲಾ, ಯುವ ರೆಡ್‍ಕ್ರಾಸ್ ಸಂಯೋಜಕರಾದ
ಶ್ರೀನಿವಾಸ್ ಮಳಲಿ, ಭರತ್ ಶಿವಕುಮಾರ್ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಮಾಲೆ (ಜಾಂಡೀಸ್) ರೋಗ ಎಂದರೇನು ? ಇಲ್ಲಿದೆ ಉಪಯುಕ್ತ ಮಾಹಿತಿ….!

ಕಾಮಾಲೆ ಅಥವಾ ಜಾಂಡೀಸ್ ಎನ್ನುವುದು ಹತ್ತು ಹಲವು ರೋಗಗಳಲ್ಲಿ ಕಂಡು ಬರುವ ದೇಹ ಸ್ಥಿತಿಯಾಗಿರುತ್ತದೆ. ಹಲವಾರು ಕಾರಣಗಳಿಂದ ಕಾಮಾಲೆ ರೋಗ ಬರುವ ಸಾಧ್ಯತೆ ಇರುತ್ತದೆ. ಕಾಮಾಲೆ ಎಂಬ ಪದವು ಕಾಮ ಮತ್ತು ಲಾ ಎಂಬ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ

ಈ ರಾಶಿಯವರ ವ್ಯವಹಾರಗಳು ನಷ್ಟವಾಗಲು ಅಕ್ಕಪಕ್ಕದವರ ಕೈಚಳಕವೇ ಕಾರಣ: ಈ ರಾಶಿಯ ಕುಟುಂಬದಲ್ಲಿ ಕಲಹಗಳು ಆಗಲು ದಾಯಾದಿಗಳೇ ಕಾರಣ : ಈ ರಾಶಿಯ ಗಂಡ ಹೆಂಡತಿ ದೂರವಾಗಲು ಹಿತೈಷಿಗಳೇ ಕಾರಣ : ಶನಿವಾರ-ರಾಶಿ ಭವಿಷ್ಯ

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

error: Content is protected !!