Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವೇದಿಕೆ ಮೇಲೆ ತಬ್ಬಿಕೊಳ್ಳುವಂತೆ ಮಾಡಿದರು.. ಇಳಿದ ಮೇಲೆ ಮತ್ತದೆ ಕಿತ್ತಾಟ : ಸಿದ್ದಾರಾಮಯ್ಯ, ಡಿಕೆಶಿ ಬಗ್ಗೆ ಬಿಜೆಪಿ ಟಾಂಗ್..!

Facebook
Twitter
Telegram
WhatsApp

 

ಬೆಂಗಳೂರು: ರಾಹುಲ್ ಗಾಂಧಿ ಸ್ಟೇಜ್ ಮೇಲೆ @siddaramaiah ಮತ್ತು @DKShivakumar ರನ್ನು ತಬ್ಬಿಕೊಳ್ಳುವಂತೆ ಮಾಡಿದರೂ ಕೆಳಗಿಳಿದು ಮತ್ತದೇ ಕಿತ್ತಾಟ ಶುರು ಮಾಡುವುದನ್ನು ನೋಡಿ, ಬೇಸತ್ತು @kharge ಯವರನ್ನು ಡ್ಯಾಮೇಜ್ ಕಂಟ್ರೋಲ್ ಮಾಡಲು ಬಿಟ್ಟರು, ಸೋಜಿಗವೆಂದರೆ ಖರ್ಗೆಯವರೇ ಮತ್ತೊಂದು ಗುಂಪಿನ ನಾಯಕ ಎಂದು ಬಿಜೆಪಿ ಸರಣಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.

ಇಬ್ಬರು ನಾಯಕರನ್ನು ದಿಲ್ಲಿಗೆ ಕರೆದು ಸಮಾಧಾನ ಮಾಡುವಷ್ಟರಲ್ಲಿ ಈಗ ಉಭಯ ನಾಯಕರ ಬಣಗಳು ಕಿತ್ತಾಟ ಶುರು ಮಾಡಿಕೊಂಡಿರುವುದು @INCIndiaಗೆ ತಲೆ ಬಿಸಿ ಶುರುವಾಗಿದೆ. ಇದು ಕಪ್ಪೆಗಳನ್ನು ಹಿಡಿದು ಕೊಳಗ ತುಂಬಿದಂತಾಗಿದ್ದು, ಇವರ ಜಗಳವನ್ನೇ ಸುಧಾರಿಸುತ್ತಿದ್ದರೆ ಚುನಾವಣೆಗೆ ಹೊರಡುವುದು ಯಾವಾಗ ಎಂಬಂತಾಗಿದೆ!

ಈಗ ಅದೇ ಕಾರಣಕ್ಕೆ @siddaramaiah ನವರ ಸುತ್ತಲೂ ತಮ್ಮ ಬೆಂಬಲಿಗರ ಕೋಟೆ ಕಟ್ಟಿದ್ದು @DKShivakumar. ಈಗ ಒಳಜಗಳ ಕೇವಲ ಡಿಕೆಶಿ v/s ಸಿದ್ದರಾಮಯ್ಯನವರ ಮಧ್ಯೆಯಷ್ಟೇ ಆಗಿರದೇ ಉಭಯ ನಾಯಕರ ಬಣಗಳ ನಡುವೆ ಹೊತ್ತಿಕೊಂಡಿದೆ. ಆಯಾ ನಾಯಕರ ಬೆಂಬಲಿಗರು ಪ್ರತಿ ಕ್ಷೇತ್ರಗಳಲ್ಲಿ ಟಿಕೆಟ್ ಜಗಳ ಶುರು ಮಾಡಿಕೊಂಡಿದ್ದಾರೆ.

ಎಲ್ಲಿ ತನಗಿಂತ ಬೆಳೆದುಬಿಡುತ್ತಾರೋ ಎಂದು @DKShivakumar ಅಧ್ಯಕ್ಷರಾಗೋದನ್ನು ತಪ್ಪಿಸಲು @siddaramaiah ಹಿಂದೆ ಆಡಿದ ಆಟಗಳು ಒಂದೆರಡಲ್ಲ. 17 ಜನ ನಾಯಕರನ್ನು ದಿಲ್ಲಿಗೆ ಕರೆದೊಯ್ದು, ಡಿಕೆಶಿಯನ್ನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಬೇಡಿ ಎಂದು ಹಿಂದಿನಿಂದ ಬಾಣ ಬಿಟ್ಟಿದ್ದನ್ನು ಡಿಕೆಶಿ ಇನ್ನೂ ಮರೆತಿಲ್ಲ.

ಇವರಿಬ್ಬರ ಜಗಳದಲ್ಲಿ @DrParameshwara ಮತ್ತು @kharge ನಡುವೆ ಪೈಪೋಟಿ ಶುರುವಾಗಿದೆ. ಎಲ್ಲಿ ಖರ್ಗೆ ಬಂದುಬಿಟ್ಟಾರೋ ಎಂದು ಪರಮೇಶ್ವರ್ ಮೆಲ್ಲಗೆ ಕುರ್ಚಿಗೆ ಟವೆಲ್ ಹಾಸಿ ಕುಳಿತಿದ್ದಾರೆ. ಈ ವಿಷಯ ತಿಳಿದಿರುವ ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರೂ ಹೊಸ ಖೆಡ್ಡವನ್ನು ತೋಡುತ್ತಿದ್ದಾರೆ!

ಕಾಂಗ್ರೆಸ್ಗೆ “ಪವರ್ ಕ್ಯಾನ್ಸರ್” ಶುರುವಾಗಿದೆ. @siddaramaiah ಮತ್ತು @DKShivakumar ಇಬ್ಬರೂ ಒಬ್ಬರಿಗಿಂತ ಇನ್ನೊಬ್ಬರು ಪವರ್ಫುಲ್ ಎಂದು ತೋರಿಸಿಕೊಳ್ಳುವ, ಹಾಗೇ ಮುಖ್ಯಮಂತ್ರಿ ಅಭ್ಯರ್ಥಿ ನಾನೇ ಎಂಬ ಸಂದೇಶ ರವಾನಿಸುವುದರಲ್ಲೇ ತಮ್ಮ ಶಕ್ತಿ ವ್ಯಯಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ : ವಕೀಲರಿಗೆ ಸನ್ಮಾನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 24 : ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಬಾಪೂಜಿ ಸಮೂಹ ಸಂಸ್ಥೆಗಳು, ರಂಗಸೌರಭ ಕಲಾ ಸಂಘ ಹಾಗೂ ಶ್ರೀ ಶಿವಕುಮಾರ ಕಲಾ ಸಂಘ ಇವರ ಸಂಯುಕ್ತ

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸೋಲಿಗೆ ಆ ಐವರು ಕಾರಣವೇ ?

ಸುದ್ದಿಒನ್ | ಮಹಾರಾಷ್ಟ್ರ ಚುನಾವಣೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷ ಕೇವಲ 16 ಸ್ಥಾನಗಳನ್ನು ಗೆದ್ದಿದೆ. ಭಾರೀ ಸೋಲಿನ ನಂತರ ಪಕ್ಷವು ಇವಿಎಂಗಳಿಂದ ನಮಗೆ ಸೋಲಾಗಿದೆ ಎಂದು ದೂರಿದೆ. ಇವಿಎಂಗಳ ದತ್ತಾಂಶದಿಂದಾಗಿ ಚುನಾವಣೆ

RCB ಸೇರ್ತಾರೆ ಅಂದುಕೊಂಡ್ರೆ ಕನ್ನಡಿಗ ರಾಹುಲ್ ಡೆಲ್ಲಿ ಪಾಲು..!

RCB ಕ್ರೇಜ್ ಎಷ್ಟಿದೆ‌ ಎಂಬುದನ್ನು ಬಿಡಿಸಿ ಹೇಳುವ ಅಗತ್ಯವಿಲ್ಲ. ಐಪಿಎಲ್ ಶುರುವಾಗುವ ಮುನ್ನವೇ ಆರ್ಸಿಬಿ ಫೀವರ್ ಅಭಿಮಾನಿಗಳಲ್ಲಿ ಜೋರಾಗಿ ಬಿಡುತ್ತದೆ. ಆರ್ಸಿಬಿ ಅಂದ್ರೆ ಅಷ್ಟು ಪ್ರೀತಿ ಕನ್ನಡಿಗರಿಗೆ. ಈಗ ಆರ್ಸಿಬಿ ಫ್ಯಾನ್ಸ್ ಖುಷಿ ಪಡೋ

error: Content is protected !!