ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದ್ದು, ಮುಂದಿನ ವರ್ಷ ಅಂದರೆ 15.1.2023 ಅರ್ಜಿ ಸಲ್ಲಿಸಲು ಕಡೆಯ ದಿನಾಂಕವಾಗಿದೆ. ನಾಳೆಯಿಂದ ಅಂದರೆ 16.12.2022ರಿಂದ ಅರ್ಜಿ ಹಾಕಬಹುದಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆನ್ಲೈನ್ ಮೂಲಕ ಅರ್ಹ, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಾಧಿಕಾರದ https://cetonline.karnataka.gov.in/kea/ ಲಿಂಕ್ ಬಳಸಿಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶವಿಲ್ಲ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು 2020 ಮತ್ತು ತಿದ್ದುಪಡಿ ಅಧಿಸೂಚನೆ ದಿನಾಂಕ 21/3/2022ರ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು, ನಿಯಮಗಳು 2022ರ ಅನ್ವಯ ಅರ್ಜಿಗಳನ್ನು ಆಹ್ವಾನಿಸಿದೆ.
ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಕೆ ಮಾಡಿದ ಮೇಲೆ ಅಭ್ಯರ್ಥಿಗಳು ಇ-ಪೋಸ್ಟ್ ಆಫೀಸ್ನಲ್ಲಿ ಶುಲ್ಕಗಳನ್ನು ಪಾವತಿ ಮಾಡಬೇಕಾಗುತ್ತದೆ. ಇದಕ್ಕೆ ಕೊನೆಯ ದಿನಾಂಕ 17.1.2023 ಆಗಿದೆ. ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 5000 ರೂ. ಅರ್ಜಿ ಶುಲ್ಕವಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇದೆ. ಆದರೆ 2500 ರೂ. ಪ್ರಕ್ರಿಯೆ ಶುಲ್ಕ ಪಾವತಿ ಮಾಡಬೇಕು. ಅರ್ಜಿಗಳನ್ನು ಸಲ್ಲಿಸುವವರು 15 ವರ್ಷಗಳ ಕಾರ್ಯಾನುಭವ ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ 50 ಸಾವಿರದಿಂದ 70 ಸಾವಿರದ ತನಕ ವೇತನ ನಿಗದಿ ಮಾಡಲಾಗಿದೆ.