ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಚಿತ್ರದುರ್ಗ, (ಡಿ.17) : ಉಗ್ರಗಾಮಿ, ಭಯೋತ್ಪಾದಕರಿಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ನಮ್ಮ ದೇಶದ ಪ್ರಧಾನಿ ನರೇಂದ್ರಮೋದಿರವರ ಬಗ್ಗೆ ಕೀಳಾಗಿ ಮಾತನಾಡಿರುವುದನ್ನು ವಿರೋಧಿಸಿ ಬಿಜೆಪಿ ವತಿಯಿಂದ ಒನಕೆ ಓಬವ್ವ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಬಿಲಾವಲ್ ಭುಟ್ಟೋ ವಿರುದ್ದ ಧಿಕ್ಕಾರಗಳನ್ನು ಕೂಗಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ಮಾತನಾಡಿ ವಿಶ್ವನಾಯಕ ಮೋದಿ ಬಗ್ಗೆ ಕೀಳಾಗಿ ಮಾತನಾಡುವ ನೈತಿಕತೆ ಬಿಲಾವಲ್ ಭುಟ್ಟೋಗಿಲ್ಲ. ಭಯೋತ್ಪಾದನೆಯನ್ನು ಹುಟ್ಟುಹಾಕುತ್ತಿರುವ ಪಾಕಿಸ್ತಾನವನ್ನು ಇಡೀ ವಿಶ್ವವೇ ದೂರವಿಟ್ಟಿದೆ ಎಂದು ಹೇಳಿದರು.
ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರೇಂದ್ರ, ಕಾರ್ಯದರ್ಶಿ ರೇಖ, ಉಪಾಧ್ಯಕ್ಷರುಗಳಾದ ಸಂಪತ್, ಶಿವಣ್ಣಾಚಾರ್, ಗ್ರಾಮಾಂತರ ಅಧ್ಯಕ್ಷ ಕಲ್ಲೇಶಯ್ಯ, ಪ್ರಧಾನ ಕಾರ್ಯದರ್ಶಿ ವಸಂತ್ ಲಕ್ಷ್ಮಿಸಾಗರ, ವೀರೇಶ್, ವಕ್ತಾರ ನಾಗರಾಜ್ಬೇದ್ರೆ, ರೈತ ಮೋರ್ಚ ಜಿಲ್ಲಾಧ್ಯಕ್ಷ ವೆಂಕಟೇಶ್ಯಾದವ್, ಬಸಮ್ಮ, ಮಂಜುಳಮ್ಮ, ಗೀತಮ್ಮ, ಲೀಲ, ವೀಣ, ಶಿವಪ್ರಸಾದ್, ಮಾರುತಿ, ರಮೇಶ್, ಮೂಡಲಗಿರಿಯಪ್ಪ, ನಾಗರಾಜ್ ಸಂಗಂ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.