Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

19 ಗ್ರಾಮಗಳ ಫಲಾನುಭವಿಗಳಿಗೆ ಜಮೀನು ಹಂಚಿಕೆ : ಶಾಸಕ ಎಂ.ಚಂದ್ರಪ್ಪ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ,(ಡಿ.17): ಹೊಳಲ್ಕೆರೆ ತಾಲ್ಲೂಕಿನ ಹತ್ತೊಂಬತ್ತು ಗ್ರಾಮಗಳಲ್ಲಿ ಬಗರ್‍ಹುಕುಂ ಸಾಗುವಳಿ ಮಾಡಿದ ರೈತರಿಗೆ ಹಕ್ಕುಪತ್ರಗಳನ್ನು ನೀಡಲು ಸಿದ್ದತೆ ಮಾಡಿಕೊಳ್ಳುವಂತೆ  ಕಂದಾಯ ಇಲಾಖೆ ಅಧಿಕಾರಿಗಳಿಗೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಸೂಚಿಸಿದರು.

ಹೊಳಲ್ಕೆರೆ ಪ್ರವಾಸಿ ಮಂದಿರದಲ್ಲಿ ಶನಿವಾರ ಬಗರ್‍ಹುಕುಂ ಅಕ್ರಮ ಸಾಗುವಳಿ ಸಕ್ರಮಿಕರಣ ಸಮಿತಿ ಸಭೆ ನಡೆಸಿ ಮಾತನಾಡಿದ ಶಾಸಕ ಎಂ.ಚಂದ್ರಪ್ಪ 19 ಗ್ರಾಮಗಳಲ್ಲಿ 478 ಫಲಾನುಭವಿಗಳಿಗೆ 860 ಎಕರೆ ಜಮೀನು ಹಂಚಿಕೆ ಮಾಡಲಾಗುವುದು.

ಇನ್ನು ಬಹಳಷ್ಟು ರೆಕಾರ್ಡ್ ಆಗಿಲ್ಲದ ಕಾರಣ ಮುಂದಿನ ದಿನಗಳಲ್ಲಿ ಅನೇಕ ಹಳ್ಳಿಗಳಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುವುದು. ಸರಿಯಾಗಿ ಕೆಲಸ ಮಾಡದ ನಾಲ್ವರು ಕಂದಾಯ ನಿರೀಕ್ಷಕರುಗಳನ್ನು ರಜೆ ಮೇಲೆ ಕಳಿಸಿ, ಸೇವೆಯಿಂದ ಅಮಾನತ್ತುಗೊಳಿಸಿ ಇಲ್ಲವೇ ವರ್ಗಾವಣೆಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ.

ಪ್ರಾಮಾಣಿಕವಾಗಿ ಕೆಲಸ ಮಾಡುವ ಗ್ರಾಮ ಲೆಕ್ಕಾಧಿಕಾರಿಗಳಿಗೆ ಚಾರ್ಜ್ ಕೊಟ್ಟು ಹೋಗಲಿ ಎಂದು ಸೋಮಾರಿ ಸಿಬ್ಬಂದಿಗಳ ವಿರುದ್ದ ಅಸಮಾಧಾನಗೊಂಡರು.

ಜಾನುವಾರುಗಳ ಮೇವಿಗೆ ಅನುಗುಣವಾಗಿ ಜಮೀನು ಕಾಯ್ದಿರಿಸಿಕೊಂಡು ಉಳಿದ ಭೂಮಿಯನ್ನು ರೈತರಿಗೆ ಹಂಚಿಕೆ ಮಾಡುವಂತೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಹೇಳಿದೆ. ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ಅನೇಕ ರೈತರಿಗೆ ಭೂಮಿ ಹಂಚಿಕೆ ಮಾಡಲಾಗಿದೆ. ಆದರೆ ಲಿಮಿಟೆಷನ್ ಮುಗಿದ ಮೇಲೆ ಕೆಲವರು ಮಾರಾಟ ಮಾಡಿಕೊಂಡು ಅಕ್ರಮ ಸಕ್ರಮ ಯೋಜನೆಯಡಿ ಮತ್ತೆ ಜಮೀನಿಗಾಗಿ ಅರ್ಜಿ ಸಲ್ಲಿಸಿರುವುದು ಸರಿಯಲ್ಲ. ಎಲ್ಲಿ ಜಮೀನು ಲಭ್ಯವಿದೆಯೋ ಅಲ್ಲಿ ಎಲ್ಲಾ ರೈತರಿಗೂ ಭೂಮಿ ನೀಡುವುದಾಗಿ ಶಾಸಕ ಎಂ.ಚಂದ್ರಪ್ಪ ಭರವಸೆ ಕೊಟ್ಟರು.

ಹೊಳಲ್ಕೆರೆ ತಹಶೀಲ್ದಾರ್ ಶ್ರೀಮತಿ ರೇಖ ಟಿ. ಶ್ರೀಮತಿ ಹಾಲಮ್ಮ, ದಗ್ಗೆಶಿವಪ್ರಕಾಶ್, ಕೃಷ್ಣಮೂರ್ತಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Aus vs Ind 1st Test : ಶತಕದ ಸನಿಹದಲ್ಲಿ ಜೈಸ್ವಾಲ್ : ಎರಡನೇ ದಿನದ ಅಂತ್ಯಕ್ಕೆ ಭಾರತ 200 ರನ್‌ಗಳ ಮುನ್ನಡೆ…!

ಸುದ್ದಿಒನ್ | ಬಾರ್ಡರ್-ಗವಾಸ್ಕರ್ ಟ್ರೋಫಿ ಮೊದಲ ಟೆಸ್ಟ್, 2 ನೇ ದಿನ :  ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಭಾರತವು ಆಸ್ಟ್ರೇಲಿಯಾ ವಿರುದ್ಧ 218 ರನ್ ಮುನ್ನಡೆ ಸಾಧಿಸಿದೆ. ಶನಿವಾರದ ಎರಡನೇ ದಿನದಾಟದ ಅಂತ್ಯಕ್ಕೆ

ಚಿತ್ರದುರ್ಗ | ನವೆಂಬರ್ 27 ಮತ್ತು 28 ರಂದು ಬಾದರದಿನ್ನಿ ರಂಗೋತ್ಸವ 2024

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 23 : ನಗರದ ತರಾಸು ರಂಗ ಮಂದಿರದಲ್ಲಿ ನ.27ರಂದು ಸಂಜೆ 5.30ಕ್ಕೆ ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಆಶ್ರಯದಲ್ಲಿ “ ಬಾದರದಿನ್ನಿ ರಂಗೋತ್ಸವ

14 ತಿಂಗಳ ಮಗುವಿಗೆ ಯಶಸ್ವಿ ಹೃದಯ ಕಸಿ : ಬೆಂಗಳೂರಿನಲ್ಲಿ ವೈದ್ಯರ ಅಪರೂಪದ ಸಾಧನೆ..!

ಬೆಂಗಳೂರು : ಇಲ್ಲಿನ ನಾರಾಯಣ ಹೃದಯಾಲಯದಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಡೆದಿದೆ. ಅತಿ ಚಿಕ್ಕ ವಯಸ್ಸಿನಲ್ಲೇ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ 14 ತಿಂಗಳ ಮಗುವಿಗೆ ನಾರಾಯಣ ಆಸ್ಪತ್ರೆ ವೈದ್ಯರು ಹೃದಯ ಕಸಿ ಚಿಕಿತ್ಸೆ ಯಶಸ್ವಿಯಾಗಿ

error: Content is protected !!