ಚಿತ್ರದುರ್ಗ,(ಡಿ.20) : ಚಿತ್ರದುರ್ಗ ತಾಲ್ಲೂಕಿನ 2022-23ನೇ ಸಾಲಿನ 1 ರಿಂದ 12ನೇ ತರಗತಿಯಲ್ಲಿರುವ ಸರ್ಕಾರಿ ಮತ್ತು ಅನುದಾನಿತ ಶಾಲಾ ಮತ್ತು ಕಾಲೇಜುಗಳಲ್ಲಿ ಕಲಿಯುತ್ತಿರುವ ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಇದೇ ಡಿಸೆಂಬರ್ 23ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಚಿತ್ರದುರ್ಗ ನಗರದ ತರಾಸು ರಂಗಮಂದಿರದ ಹತ್ತಿರದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ಹಮ್ಮಿಕೊಳ್ಳಲಾಗಿದೆ.
ಅಲಿಂಕೋ ಸಹಯೋಗದಲ್ಲಿ ನುರಿತ ವೈದ್ಯರುಗಳಿಂದ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಚಿತ್ರದುರ್ಗ ತಾಲ್ಲೂಕಿನಲ್ಲಿರುವ ವಿಕಲಚೇತನ ವಿದ್ಯಾರ್ಥಿಗಳು ಭಾಗವಹಿಸುವಂತೆ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರುಗಳು ಹಾಗೂ ಪೋಷಕರು ಕ್ರಮವಹಿಸಿ ಈ ಶಿಬಿರದ ಸದುಪಯೋಗ ಪಡಿಸಿಕೊಳ್ಳಲು ಕೋರಿದೆ.
ಶಿಬಿರಕ್ಕೆ ಬರುವಾಗ ಅಂಗವಿಕಲರ ಗುರುತಿನ ಚೀಟಿ, ಯುಡಿಐಡಿ ಕಾರ್ಡ್, ವೈದ್ಯಕೀಯ ಪ್ರಮಾಣಪತ್ರದ ಜೆರಾಕ್ಸ್ ಪ್ರತಿ, ಬಿ.ಪಿ.ಎಲ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಎರಡು ಭಾವಚಿತ್ರ ಹಾಗೂ ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಸೇರಿದಂತೆ ಈ ಎಲ್ಲಾ ದಾಖಲೆಗಳ ಎರಡು ಸೆಟ್ ಜೆರಾಕ್ಸ್ ಪ್ರತಿಯನ್ನು ತರಬೇಕು ಎಂದು ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಿಳಿಸಿದ್ದಾರೆ.