Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿಂದುತ್ವದ ದೃಷ್ಟಿಯಲ್ಲಿ ಸಾಗೋಣ, ಹಿಂದೂತ್ವಕ್ಕಾಗಿ  ಸೇರೋಣ ;ಆರ್ ಎಸ್‍ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಘೋಷ್ ಪ್ರಮುಖ್ ಗಿರೀಶ್ ಹೇಳಿಕೆ

Facebook
Twitter
Telegram
WhatsApp

ಸುದ್ದಿಒನ್,ಚಿತ್ರದುರ್ಗ, (ಅ.02) : ನಾವೆಲ್ಲ ಹಿಂದುತ್ವದ ದೃಷ್ಟಿಯಿಂದ ಕೆಲಸ ಮಾಡಿದಾಗ ಮಾತ್ರ ಲವ್ ಜಿಹಾದ್, ಮತಾಂತರದ ಪಿಡುಗುಗಳನ್ನು ಕಿತ್ತೆಸೆಯಲು ಸಾಧ್ಯ ಎಂದು ಆರ್ ಎಸ್‍ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಘೋಷ್ ಪ್ರಮುಖ್ ಗಿರೀಶ್ ಹೇಳಿದರು.

ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಇಂದು ದೇಶವನ್ನು ಈ ಎರಡು ಪಿಡುಗುಗಳು ಕಾಡುತ್ತಿವೆ. ಆದ್ದರಿಂದ ನಾವುಗಳು ಒಗ್ಗಾಟ್ಟಾಗಿ ಕೆಲಸ ಮಾಡಬೇಕು ಎಂದರು.

ಹಿಂದುತ್ವ ಒಂದು ಜಾತಿಯಲ್ಲ, ಮತ ಪಂಥವಲ್ಲ ಅದು ಮನುಷ್ಯನ ಜೀವನಕ್ಕೆ ಪೂರಕವಾದದ್ದು. ಇಲ್ಲಿ ನಾವು ಸೇರಿರುವುದು ಡಿಜೆಗಾಗಿ ಅಲ್ಲ. ಬದಲಾಗಿ ಹಿಂದೂತ್ವಕ್ಕೆ ಬಂದಿದ್ದೇವೆ ಎಂಬುದನ್ನು ತಿಳಿಯಬೇಕು ಎಂದರು.

ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಕುಡಾ ಅಧ್ಯಕ್ಷ ಬದ್ರಿನಾಥ್, ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಪ್ರಭು ಮಡಿವಾಳ ಮಾಚಿದೇವ ಸ್ವಾಮೀಜಿ, ಛಲವಾದಿ ಗುರುಪೀಠದ ಶ್ರೀ ಬಸವನಾಗೀದೇವ ಸ್ವಾಮೀಜಿ, ಬಂಜಾರ ಗುರುಪೀಠದ ಶ್ರೀ ಸೇವಾಲಾಲ್ ಸ್ವಾಮೀಜಿ, ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ತಮಿಳುನಾಡಿನ ಮಂಜುನಾಥ ಸ್ವಾಮೀಜಿ, ಕೆ.ಎಸ್.ನವೀನ್, ಜಿ.ಎಸ್.ಅನಿತ್ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

ಪೆನ್ ಡ್ರೈವ್ ಲೀಕ್ ಮಾಡಿದ್ದು ಪ್ರಜ್ವಲ್ ರೇವಣ್ಣ ಕಾರು ಡ್ರೈವರ್..? ದೇವರಾಜೇಗೌಡ ಹೇಳಿದ್ದೇನು..?

ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಈಗಾಗಲೇ ಸಾಕಷ್ಟು ಜನರ ಕೈಗೆ ಸಿಕ್ಕಿದೆ. ಮೂರು ಸಾವಿರಕ್ಕೂ ಹೆಚ್ಚು ವಿಡಿಯೋಗಳು ಇವೆ ಎನ್ನಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ

error: Content is protected !!