ಬೆಂಗಳೂರು: ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಖಾಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಬಗ್ಗೆ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಫಾರ್ಮಸಿ ಅಧಿಕಾರಿ ಮತ್ತು ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕೂಡಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಲ್ಪಾವಧಿ ಟೆಂಡರ್ ಕರೆದು ನಿಯಮಾನುಸಾರ ಹುದ್ದೆಗೆ ಭರ್ತಿ ಮಾಡಲು ಸೂಚನೆ ನೀಡಲಾಗಿದೆ.
400 ಫಾರ್ಮಸಿ ಹುದ್ದೆಗಳು ಹಾಗೂ 150 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿಗಳನ್ನು ಹೊರಗುತ್ತುಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿದ್ದು, ಯಾವ ಜಿಲ್ಲೆಗೆ ಎಷ್ಟು ಹುದ್ದೆಗಳನ್ನು ನೀಡಲಾಗಿದೆ ಎಂಬ ಮಾಹಿತಿಯನ್ನು ನೀಡಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.@DHFWKA pic.twitter.com/p10BfYfG7v
— Dr Sudhakar K (@DrSudhakar_) December 20, 2022
ಚಿತ್ರದುರ್ಗ 21, ಕೋಲಾರ 7, ಚಿಕ್ಕಬಳ್ಳಾಪುರ 6, ದಾವಣಗೆರೆ 16, ಶಿವಮೊಗ್ಗ 22, ತುಮಕೂರು 17, ಮೈಸೂರು 31, ಮಂಡ್ಯ 23, ಚಿಕ್ಕಮಗಳೂರು 28, ಚಾಮರಾಜನಗರ 22, ಹಾಸನ 46, ಕೊಡಗು 15, ದಕ್ಷಿಣ ಕನ್ನಡ 25 ಮತ್ತು ಉಡುಪಿಯಲ್ಲಿ 15 ಫಾರ್ಮಸಿ ಅಧಿಕಾರಿ ಹುದ್ದೆ ಭರ್ತಿ ಮಾಡಲಾಗುತ್ತಿದೆ.