ಬಳ್ಳಾರಿ,(ಡಿ.20): ಮಹಾತ್ಮಗಾಂಧಿ ನರೇಗಾ ಯೋಜನೆಯ ಜಲ ಸಂಜೀವಿನಿ ಕಾರ್ಯಕ್ರಮದಡಿ 2023-24ನೇ ಸಾಲಿನಲ್ಲಿ ಜಲ ಸಂಜೀವಿನಿ ಯೋಜನೆಯ ಮೇಲ್ವಿಚಾರಣೆ ಮಾಡಲು ಜಲ ಸಂಜೀವಿನಿ ಜಿಲ್ಲಾ ಸಂಯೋಜಕರನ್ನು ಜಿಲ್ಲಾ ಮಟ್ಟದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಲಿಂಗಮೂರ್ತಿ ಅವರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ನ ಮಹಾತ್ಮಗಾಂಧಿ ನರೇಗಾ ಕೋಶದಲ್ಲಿ ಅರ್ಜಿಗಳನ್ನು ಪಡೆದು ಡಿಸೆಂಬರ್ 30 ರೊಳಗೆ ಸಲ್ಲಿಸಬೇಕು. ಗರಿಷ್ಠ 65 ವರ್ಷ ವಯೋಮಿತಿ ಒಳಗಿರಬೇಕು.
ನಿವೃತ್ತಿ ಹೊಂದಿದ ಅಧಿಕಾರಿಗಳ ಅರ್ಹತೆಗಳು: ಬಿಎಸ್ಸಿ (ಅಗ್ರಿಕಲ್ಚರ್) ಅಥವಾ ಬಿ.ಟೆಕ್ (ಅಗ್ರಿಕಲ್ಚರ್ ಇಂಜಿನಿಯರಿಂಗ್) ಪದವಿಧರರಾಗಿರಬೇಕು.
ಕೃಷಿ, ಜಲಾನಯನ ಅಭಿವೃದ್ಧಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳು ಜಲಾನಯನ ಅಭಿವೃದ್ಧಿ ಕಾರ್ಯಕ್ರಮದ ಕನಿಷ್ಠ 10 ವರ್ಷ ಅನುಭವ ಹೊಂದಿರಬೇಕು. ಕನಿಷ್ಠ ಸಹಾಯಕ ಕೃಷಿ ನಿರ್ದೇಶಕರ ಹುದ್ದೆಯಲ್ಲಿ ನಿವೃತ್ತಿ ಹೊಂದಿರುವ ಅಧಿಕಾರಿಗಳು.
ಜಿಲ್ಲಾ ಪಂಚಾಯತ್ ಹಾಗೂ ಇತರೆ ಅನುಷ್ಠಾನ ಇಲಾಖೆಗಳೊಡನೆ ಸಮನ್ವಯ ಸಾಧಿಸುವ ಸಾಮಥ್ರ್ಯ ಹೊಂದಿರಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ದಿನಾಂಕ ಜನವರಿ 2 ಆಗಿರುತ್ತದೆ.ಮಾಸಿಕ ರೂ.50 ಸಾವಿರ ಮತ್ತು 5 ಸಾವಿರ ಪ್ರಯಾಣ ಹಾಗೂ ಇತರೆ ಭತ್ಯೆಗಳು ಇರುತ್ತದೆ.
ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಆಯಾ ಜಿಲ್ಲಾ ಪಂಚಾಯತ್ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯತ್ ಕಚೇರಿ ಅಥವಾ ದೂ.08392-266130 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.