ಹಿರಿಯೂರಿನಲ್ಲಿ ಕಾಂಗ್ರೆಸ್ v/s ಕಾಂಗ್ರೆಸ್ : ಸೋಮಶೇಖರ್ ಮೇಲೆ ಮಾಜಿ ಸಚಿವರ ಬೆಂಬಲಿಗರಿಂದ ಹಲ್ಲೆ ಆರೋಪ : ವಿಡಿಯೋ ವೈರಲ್

suddionenews
1 Min Read

ಚಿತ್ರದುರ್ಗ : ಕಾಂಗ್ರೆಸ್ ಮುಖಂಡ ಹಾಗೂ ಎಂ ಎಲ್ ಸಿ ಪರಾಜಿತ ಅಭ್ಯರ್ಥಿ ಬಿ. ಸೋಮಶೇಖರ್ ಮೇಲೆ ಮಾಜಿ ಸಚಿವ ಡಿ.ಸುಧಾಕರ್ ಬೆಂಬಲಿಗರು ಗುರುವಾರ ರಾತ್ರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಹಿರಿಯೂರು ತಾಲೂಕಿನ ಧರ್ಮಪುರ ಗ್ರಾಮದಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಅವರು ವೀಕ್ಷಣೆಗೆ ಆಗಮಿಸಿದ್ದ ವೇಳೆ ಮಾಜಿ ಸಚಿವ ಸುಧಾಕರ್ ಹಾಗೂ ಸೋಮಶೇಖರ್ ಬೆಂಬಲಿಗರ ಮಧ್ಯೆ ಪರಸ್ಪರ ಹಲ್ಲೆ ನಡೆದಿದೆ.
ಎನ್ನಲಾಗಿದ್ದು ಹಲ್ಲೆಗೊಳಗಾದವರನ್ನು ಹಿರಿಯೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಿದ್ದಾರೆ ಎನ್ನಲಾಗಿದೆ.

ವೇದಿಕೆಯಲ್ಲಿ ನಾಯಕರು ಕುಳಿತಿದ್ದಾಗ ಈ ಘಟನೆ ನಡೆದಿದೆ. ಮಾಜಿ ಸಚಿವ ಡಿ ಸುಧಾಕರ್ ಬೆಂಬಲಿಗರು ಸುಧಾಕರ್ ಅವರಿಗೆ ಜೈಕಾರ ಹಾಕಿದ್ದಾರೆ. ಇತ್ತ ಬಿ. ಸೋಮಶೇಖರ್ ಅವರ ಬೆಂಬಲಿಗರು ಕೂಡ ಜೈಕಾರ ಹಾಕಿದ್ದಾರೆ. ಇದರಿಂದ ರೊಚ್ಚಿಗೆದ್ದ ಸುಧಾಕರ್ ಬೆಂಬಲಿಗರು ಸೋಮಶೇಖರ್ ಸೇರಿದಂತೆ ಅವರ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಲ್ಲೆ ನಡೆದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ‌ಆಗಿವೆ.

ಈ ಹಿಂದೆಯೂ ಕೂಡಾ ಹಿರಿಯೂರು ನಗರದ ಹೊರವಲಯದಲ್ಲಿ ನಡೆದ ಬಾಬು ಜಗಜೀವನರಾಂ ಜಯಂತಿ ವೇಳೆ  ಪ್ಲೆಕ್ಸ್ ಕಟ್ಟುವ ವಿಚಾರವಾಗಿ ಸಹ ಇಬ್ಬರು ನಾಯಕರ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿತ್ತು.

ಅಬ್ಬಿನಹೊಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಎರಡೂ ಕಡೆಯವರಿಂದ ದೂರು ಪ್ರತಿ ದೂರು ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *