ರಾಮನಗರ: ಒಂದು ಕಡೆ ಮೂರು ತಿಂಗಳಾದರೂ ಚಿಂತೆಯಿಲ್ಲ ಸಚಿವರಾಗಲೇಬೇಕೆಂದು ಓಡಾಡುತ್ತಿದ್ದಾರೆ.. ಮತ್ತೊಂದು ಕಡೆ ಈ ಬಾರಿ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದ್ದಾರೆ ಎಂಬ ವದಂತಿಯೂ ಕೇಳಿ ಬರುತ್ತಿದೆ. ಆದರೆ ಅದಕ್ಕೆಲ್ಲಾ ಇಂದು ಸಿ ಪಿ ಯೋಗೀಶ್ವರ್ ಕ್ಲಾರಿಟಿ ಕೊಟ್ಟಿದ್ದಾರೆ. ನಾನು ಬಿಜೆಪಿಯಲ್ಲಿಯೇ ಇರುತ್ತೇನೆ, ಬಿಜೆಪಿಯಿಂದಾನೇ ಸ್ಪರ್ಧಿಸುತ್ತೇನೆ ಎಂದು ಹೇಳುವ ಮೂಲಕ ಪ್ರತ್ಯೇಕ ಪಕ್ಷ ಸ್ಥಾಪನೆ ವಿಚಾರಕ್ಕೆ ತೆರೆ ಎಳೆದಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಬಿಜೆಪಿ ಅವರಿಗೆ ಧನ್ಯವಾದ ಹೇಳಬೇಕು. ಕುಮಾರಸ್ವಾಮಿಯವರು ರಾಜ್ಯದ ಸಿಎಂ ಆಗಿದ್ದಾಗ ಕ್ಷೇತ್ರಕ್ಕೆ ಏನು ಅಭಿವೃದ್ಧಿ ಮಾಡಲಿಲ್ಲ. ಜಿಲ್ಲೆಗೆ ಬಹಳಷ್ಟು ಅಭಿವೃದ್ಧಿಗಳು ಬಿಜೆಪಿ ಸರ್ಕಾರದಲ್ಲಿ ಆಗಿವೆ. ಜನರನ್ನು ಭಾವನಾತ್ಮಕವಾಗಿ ಸೆಳೆಯಲು ಕುಮಾರಸ್ವಾಮಿ ಮುಂದಾಗಿದ್ದಾರೆ. ಕುಮಾರಸ್ವಾಮಿ ಕಳೆದ ಬಾರಿ ನನ್ನನ್ನು ಮೋಸ ಮಾಡಿ ಸೋಲಿಸಿದ್ದಾರೆ. ಜನರಿಗೆ ಸುಳ್ಳು ಆಶ್ವಾಸನೆ ಕೊಟ್ಟು ಮತ ಹಾಕಿಸಿಕೊಂಡಿದ್ದಾರೆ. ಕ್ಷೇತ್ರದಲ್ಲಿ ನನ್ನನ್ನು ತೀರಿಸುವವರು, ಉಳಿಸುವವರು ನನ್ನ ಕ್ಷೇತ್ರದ ಮತದಾರರು.
ಚನ್ನಪಟ್ಟಣ ಕ್ಷೇತ್ರ ಅಭಿವೃದ್ಧಿ ಆಗಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ನಾನು ವೈಯಕ್ತಿಕವಾಗಿ ಬಿಜೆಪಿ ಪಕ್ಷದಿಂದ ಹೆಸರು ಗಳಿಸಿದ್ದೇನೆ. ಹಾಗಾಗಿ ನಾನು ಚನ್ನಪಟ್ಟಣ ದಿಂದ ಸ್ಪರ್ಧೆ ಮಾಡುತ್ತೇನೆ ಕ್ಷೇತ್ರದ ಜನರು ನನ್ನ ಕೈಹಿಡಿಯುತ್ತಾರೆ. 2023ರ ವಿಧಾನಸಭಾ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಚಟುವಟಿಕೆ ಆರಂಭಿಸಿವೆ. ಮುಂದಿನ ದಿನಗಳಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲೂ ಬಿಜೆಪಿ ಪಕ್ಷದ ವತಿಯಿಂದ ಜನಸಂಕಲ್ಪಾ ಯಾತ್ರೆ ಮಾಡಲಾಗುತ್ತದೆ. ಜೆಡಿಎಸ್ ಪಕ್ಷದವರು ಈಗಾಗಲೇ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ನನ್ನ ವಿರುದ್ದವಾಗಿ ಸ್ಪರ್ಧೆ ಮಾಡಲು ಮಾಜಿ ಸಿಎಂ ಕುಮಾರಸ್ವಾಮಿ ಬಯಸಿದ್ದಾರೆ. ನಾನು ಕೂಡ ಬಿಜೆಪಿಯಿಂದ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದೇನೆ ಎಂದಿದ್ದಾರೆ.