ಬೆಂಗಳೂರು: ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಉಪಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಕೆ ಕೆ ಗೆಸ್ಟ್ ಹೌಸ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂದು ಕೋರ್ ಕಮಿಟಿ ಸಭೆಯಲ್ಲಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ಮಾಡುತ್ತೇವೆ.ಈಗಾಗಲೇ ಎರಡು ಕ್ಷೇತ್ರದಲ್ಲಿ ನಾವು ಕೆಲಸ ಪ್ರಾರಂಭ ಮಾಡಿದ್ದೇವೆ ಎಂದರು.
ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ವಿಚಾರವಾಗಿ ಚರ್ಚೆ ನಡೆಸುತ್ತೇವೆ. ರಾಜ್ಯ ಚುನಾವಣೆ ಕಮಿಟಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಚುನಾವಣೆ ಸಮಿತಿಗೆ ಕಳಿಸುತ್ತೆ. ಕೇಂದ್ರ ಚುನಾವಣೆ ಸಮಿತಿ ಅಭ್ಯರ್ಥಿಗಳನ್ನ ಘೋಷಣೆ ಮಾಡುತ್ತೆ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲಲ್ಲಲಿದೆ ಎಂದರು.
ಹೈಕಮಾಂಡ್ ಒಪ್ಪಿದ್ರೆ ಹಾನಗಲ್ ಕ್ಷೇತ್ರದಿಂದ ಚುನಾವಣೆ ಸ್ಪರ್ಧೆಗೆ ರೆಡಿ ಅನ್ನೋ ವಿಜಯೇಂದ್ರ ಹೇಳಿಕೆ ವಿಚಾರಕ್ಕೆ ಉತ್ತರಿಸಿದ ಅವರು,
ಇಂದಿನ ಸಭೆಯಲ್ಲಿ ಅಭ್ಯರ್ಥಿಗಳ ಚರ್ಚೆ ಮಾಡ್ತೀವಿ, ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಗೆ ಒಂದು ಪದ್ದತಿ ಇದೆ. ಅದರಂತೆ ಅಭ್ಯರ್ಥಿಗಳ ಆಯ್ಕೆ ಆಗುತ್ತೆ ರಾಜ್ಯ ಚುನಾವಣೆ ಸಮಿತಿ ಅಭ್ಯರ್ಥಿಗಳ ಹೆಸರು ಕಳಿಸುತ್ತೆ. ಅ ಬಳಿಕ ಕೇಂದ್ರ ಚುನಾವಣೆ ಸಮಿತಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುತ್ತೆ ಎಂದು ಹೇಳಿದರು.