ಬೆಂಗಳೂರು: ಕೊರೊನಾ ಸೋಂಕು ದಿನೇ ದಿನೇ ಹೆಚ್ಚಾಗುತ್ತಿದೆ, ಕೊರೊನಾ ಕಂಟ್ರೋಲ್ ಗೆ ಸರ್ಕಾರ ಒಂದಷ್ಟು ಕಠಿಣ ಕ್ರಮ ತೆಗೆದುಕೊಂಡಿದೆ. ಅದರಲ್ಲಿ ಶಾಲಾ-ಕಾಲೇಜುಗಳಲ್ಲಿಯೇ ಮಾಸ್ಕ್ ಕಡ್ಡಾಯಗೊಳಿಸಿದೆ. ಬಿಎಫ್ 7 ಭೀತಿ ಎದುರಾದ ಹಿನ್ನೆಲೆ ಹೊಸ ನಿಯಮಗಳನ್ನು ಜಾರಿಗೆ ತಂದಿದೆ.
ಕೊರೊನಾದಿಂದ ವಿದ್ಯಾರ್ಥಿಗಳನ್ನು ರಕ್ಷಿಸುವುದಕ್ಕೆ ಮಾಸ್ಕ್, ಸ್ಯಾನಿಟೈಸರ್ ಕಡ್ಡಾಯ ಮಾಡಲಾಗಿದೆ. ನೆಗಡಿ, ಕೆಮ್ಮು, ಜ್ಚರದಂತ ಲಕ್ಷಗಳು ಕಂಡು ಬಂದರೆ ತಕ್ಷಣವೇ ಕೊರೊನಾ ಟೆಸ್ಟ್ ಗೆ ಒಳಗಾಗಬೇಕು ಎಂದು ಸೂಚನೆ ನೀಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರು ಸಾಮಾಜಿಕ ಅಂತರವನ್ನು ಪಾಲನೆ ಮಾಡಬೇಕೆಂದು ತಿಳಿಸಿದ್ದಾರೆ.
ಎಲ್ಲರೂ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದ್ದಾರೆ. ಹೊಸ ವರ್ಷಾಚರಣೆಗೂ ಹೊಸ ನಿಯಮಗಳನ್ನು ನೀಡಿದ್ದಾರೆ. ಹೆಚ್ಚೆಚ್ಚು ಜನ ಗುಂಪು ಗುಂಪಾಗಿ ಸೇರದಂತೆ ಸೂಚನೆ ನೀಡಿದ್ದಾರೆ. ಹೊಸ ವರ್ಷಾಚರಣೆಗೆಂದು ಜನ ಬೀಚ್, ರೆಸಾರ್ಟ್ ಅಂತ ಗುಂಪು ಸೇರುತ್ತಾರೆ. ಹೀಗಾಗಿ ಎಚ್ಚರದಿಂದ ಇರಲು ಸೂಚಿಸಿದ್ದಾರೆ.