ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ. ರೆಡ್ಡಿಗೆ ಆತ್ಮೀಯರಾದ ಕೆಲವರು ಈಗಾಗಲೇ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸಚಿವ ಅಶ್ವತ್ಥ್ ನಾರಾಯಣ್ ಮಾತನಾಡಿದ್ದು, ಜನಾರ್ದನ ರೆಡ್ಡಿ ಹೊಸ ಪಕ್ಷದ ಭವಿಷ್ಯವನ್ನು ಜನರೇ ನಿರ್ಧರಿಸುತ್ತಾರೆ ಎಂದಿದ್ದಾರೆ.
ಪಕ್ಷ ಸ್ಥಾಪನೆ ಮಾಡುವ ಹಕ್ಕು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಇದೆ. ಅದರಿಂದ ಬಿಜೆಪಿ ಪಕ್ಷಕ್ಕೇನು ತೊಂದರೆಯಾಗುವುದಿಲ್ಲ. ಇದು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಇಲ್ಲಿ ಎಲ್ಲರಿಗೂ ಅವಕಾಶವಿದೆ. ಜನಾರ್ದನ ರೆಡ್ಡಿಯವರು ಕೂಡ ಅದೇ ಹಾದಿಯಲ್ಲಿ ಪಕ್ಷವನ್ನು ಸ್ಥಾಪಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರೇ ನಿರ್ಧರಿಸುತ್ತಾರೆ ಎಂದಿದ್ದಾರೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಮುಂಬರುವ ಚುನಾವಣೆಯಲ್ಲಿ ಗಂಗಾವತಿಯಿಂದ ಸ್ಪರ್ಧಿಸುತ್ತೇನೆಂದು ಹೇಳಿದ್ದಾರೆ. 10 ವಿಧಾನಸಭಾ ಚುನಾವಣೆಯಲ್ಲಿ ಅವರು ಜನ ಬೆಂಬಲ ಹೊಂದಿದ್ದಾರೆ ಎನ್ನಲಾಗಿದೆ. ಇದು ಸಹಜವಾಗಿಯೇ ಬಿಜೆಪಿಗೆ ಹೊಡೆತ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.