Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಿಶಿಷ್ಟ ಪಂಗಡಕ್ಕೆ ಕಾಡುಗೊಲ್ಲರ ಸೇರ್ಪಡೆ : ಜನವರಿಯಲ್ಲಿ ಮುಖ್ಯಮಂತ್ರಿಯವರಿಂದ ಕೇಂದ್ರ ಸಚಿವರ ಭೇಟಿ : ಸಚಿವ ಜೆ.ಸಿ‌.ಮಾಧುಸ್ವಾಮಿ

Facebook
Twitter
Telegram
WhatsApp

 

ಮಾಹಿತಿ ಕೃಪೆ :
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಬೆಳಗಾವಿ(ಸುವರ್ಣಸೌಧ)ಡಿ.27:
ಕುರಿ ಕಾಯುವ ವೃತ್ತಿಯಲ್ಲಿರುವ ಕಾಡುಗೊಲ್ಲ ಸಮಾಜವನ್ನು ಪರಿಶಿಷ್ಟ ಪಂಗಡದ ಜಾತಿಗಳ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ‌.ಈ ಕುರಿತು  ಕೇಂದ್ರ ಸಾಮಾಜಿಕ ನ್ಯಾಯ ಸಬಲೀಕರಣ ಸಚಿವರನ್ನು ಭೇಟಿಯಾಗಿ ಚರ್ಚಿಸಲು ಜನೆವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮುಖ್ಯಮಂತ್ರಿಯವರು ನವದೆಹಲಿಗೆ ತೆರಳಲಿದ್ದಾರೆ. ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ‌.ಮಾಧುಸ್ವಾಮಿ ಹೇಳಿದರು.

ವಿಧಾನಸಭೆಯ ಶೂನ್ಯವೇಳೆಯಲ್ಲಿಂದು ಹೊಸದುರ್ಗ  ಶಾಸಕ ಗೂಳಿಹಟ್ಟಿ ಶೇಖರ್ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿ  ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿದರು.

ಈ ಮೊದಲು ಹಿಂದುಳಿದ ಬುಡಕಟ್ಟು(ಬಿಟಿ)ಗಳ ಪಟ್ಟಿಯಲ್ಲಿದ್ದ ಕಾಡುಗೊಲ್ಲ ಹಾಗೂ  ವಾಲ್ಮೀಕಿನಾಯಕ ಜಾತಿಗಳ ಪೈಕಿ ವಾಲ್ಮೀಕಿನಾಯಕರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದಾಗ ಕಾಡುಗೊಲ್ಲರನ್ನು ಪ್ರವರ್ಗ 1 ರಲ್ಲಿ ಮುಂದುವರೆಸಲಾಯಿತು.

ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಅಗತ್ಯವಿದ್ದ ಕುಲಶಾಸ್ತ್ರ ಅಧ್ಯಯನ ಕೈಗೊಳ್ಳಲು ಮಾನವಶಾಸ್ತ್ರಜ್ಞರಾದ ಅನ್ನಪೂರ್ಣಮ್ಮ ನೇತೃತ್ವದ ಸಮಿತಿ ರಚಿಸಲಾಯಿತು.

ಅವರು ನೀಡಿದ ವರದಿ ಆಧರಿಸಿ 2014 ರಲ್ಲಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಯಿತು.ಕುಲಶಾಸ್ತ್ರ ಅಧ್ಯಯನದ ಕೆಲವು ಅಂಶಗಳಲ್ಲಿ ಕಾಡುಗೊಲ್ಲರ ಕೆಲವು ಆಚರಣೆಗಳು  ಎಸ್.ಟಿ.ಗೆ ಸೇರ್ಪಡೆ ಮಾಡಲು ಪೂರಕವಾಗಿಲ್ಲ ಎಂದು ಕೇಂದ್ರ ಕೆಲವು ಸ್ಪಷ್ಟನೆಗಳನ್ನು ಕೇಳಿತ್ತು.ಬುಡಕಟ್ಟು ಸಂಶೋಧನಾ ಸಂಸ್ಥೆಯ ಮೂಲಕ ಸ್ಪಷ್ಟನೆಗಳನ್ನು ಪಡೆದು ಕೇಂದ್ರಕ್ಕೆ ಕಳುಹಿಸಲಾಗಿದೆ.

ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಮುಖ್ಯಮಂತ್ರಿಯವರು ನವದೆಹಲಿಗೆ ತೆರಳಿ ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವರನ್ನು ಭೇಟಿ ಮಾಡಲಿದ್ದಾರೆ.ರಾಜ್ಯ ಸರ್ಕಾರ ಈ ವಿಷಯದಲ್ಲಿ ಬದ್ಧತೆ ಹೊಂದಿದೆ ಎಂದರು.

ಹಿರಿಯೂರು ಶಾಸಕಿ ಪೂರ್ಣಿಮಾ ಮಾತನಾಡಿ,ಕಳೆದ ತಿಂಗಳು ನವದೆಹಲಿಗೆ ತೆರಳಿದ್ದ ಸಮಾಜದ ನಿಯೋಗಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಸಹಕಾರದಿಂದ ಕೇಂದ್ರ ಸರ್ಕಾರದ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ,ಈ ವಿಷಯದಲ್ಲಿ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿದರೆ ಸಾಲದು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬದುಕಿನಲ್ಲಿ ರಂಗಭೂಮಿ ಉತ್ತಮ ಮಾರ್ಗದರ್ಶನ ನೀಡುತ್ತದೆ : ಡಾ.ಬಸವಕುಮಾರ ಸ್ವಾಮೀಜಿ

    ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22: ಜೀವನ ಒಂದು ನಾಟಕರಂಗ ನಾವುಗಳು ಅದರ ಪಾತ್ರಧಾರಿಗಳು. ಬದುಕಿನಲ್ಲಿ ನಾನಾ ಕಷ್ಟಸುಖಗಳು ಬರುತ್ತವೆ. ಅದಕ್ಕೆಲ್ಲಾ ಉತ್ತಮ ಮಾರ್ಗದರ್ಶನ ನೀಡುವುದು ರಂಗಭೂಮಿ ಮಾತ್ರ ಎಂದು ಎಸ್.ಜೆ.ಎಮ್. ವಿದ್ಯಾಪೀಠದ

ಉಪಚುನಾವಣೆ ಫಲಿತಾಂಶದ ಬಳಿಕ ಸಂಪುಟ ವಿಸ್ತರಣೆ : ಡಿಕೆ ಶಿವಕುಮಾರ್ ಹೇಳಿದ್ದೇನು..?

ಮುರುಡೇಶ್ವರ: ರಾಜ್ಯದ ಉಪಚುನಾವಣೆ, ಮಹಾರಾಷ್ಟ್ರ ಎಲೆಕ್ಷನ್ ಮುಗಿಸಿಕೊಂಡು ಡಿಸಿಎಂ ಡಿಕೆ ಶಿವಕುಮಾರ್ ತಮ್ಮ ಪತ್ನಿ ಜೊತೆಗೆ ಬಿಜಚ್ ಕಡೆಗೆ ಹೋಗಿದ್ದಾರೆ. ಮುರುಡೇಶ್ವರ ಬೀಚಗ ಸದ್ದಿನಲ್ಲಿ ಕೂತು ಕೊಂಚ ರಿಲ್ಯಾಕ್ಸ್ ಆಗಿದ್ದಾರೆ. ಇದೇ ವೇಳೆ ಸಂಪುಟ

ವಕ್ಫ್ ವಿರುದ್ದ ನವೆಂಬರ್ 25 ರಂದು ಭಾರತೀಯ ಕಿಸಾನ್ ಸಂಘದಿಂದ ಬೃಹತ್ ಹೋರಾಟ : ಕರಿಕೆರೆ ತಿಪ್ಪೇಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಭಾರತೀಯ ಕಿಸಾನ್ ಸಂಘದ ವತಿಯಿಂದ ವಕ್ಫ್ ವಿರುದ್ಧ ಬೃಹತ್ ಹೋರಾಟವನ್ನು ಹಮ್ಮಿಕೊಳ್ಳಲಾಗಿದೆ

error: Content is protected !!