ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 664 ಮಂದಿಗೆ ಹೊಸದಾಗಿ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 21006 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 105380 RTPCR ಟೆಸ್ಟ್ ಸೇರಿದಂತೆ ಒಟ್ಟು 126386 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 664 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅದರಲ್ಲಿ 196 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಕೊರೊನಾವನ್ನ ಜಯಿಸಿ 711 ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಕೊರೊನಾದಿಂದ ರಾಜ್ಯಾದ್ಯಂತ ಕಳೆದ 24 ಗಂಟೆಯಲ್ಲಿ 8 ಜನ ಅಸುನೀಗಿದ್ದಾರೆ.