ಉತ್ತರಪ್ರದೇಶ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಿದೆ. ರಾಹುಲ್ ಗಾಂಧಿಗೆ ಅಭೂತಪೂರ್ವ ರೆಸ್ಪಾನ್ಸ್ ಕೂಡ ಸಿಗುತ್ತಿದೆ. ಇಂದು ಉತ್ತರ ಪ್ರದೇಶದಿಂದ ಸಾಗಿದ ಯಾತ್ರೆಯಲ್ಲಿ ಪ್ರಿಯಾಂಕ ಗಾಂಧಿ ಕೂಡ ಯಾತ್ರೆಯಲ್ಲಿ ಭಾಗಿಯಾಗಿದ್ದರು. ಜೊತೆಗೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಕೂಡ ರಾಹುಲ್ ಗಾಂಧಿಗೆ ಸಾಥ್ ನೀಡಿದರು.
ಯಾತ್ರೆಯ ನಡುವೆ ಫಾರೂಕ್ ಅಬ್ದುಲ್ಲಾ ಎಂಟ್ರಿ ಕೊಟ್ಟಿದ್ದಾರೆ. ಇವರನ್ನು ತಬ್ಬಿಕೊಂಡು ಸ್ವಾಗತಿಸಿದ್ದಾರೆ. ಪ್ರಿಯಾಂಕ ಗಾಂಧಿ ಶೇಕ್ ಹ್ಯಾಂಡ್ ಮಾಡುವ ಮೂಲಕ ಬರ ಮಾಡಿಕೊಂಡಿದ್ದಾರೆ. ಈ ಹಿಂದೆಯೇ ಕೆ ಸಿ ವೇಣುಗೋಪಾಲ್ ಈ ಬಗ್ಗೆ ಮಾಹಿತಿ ನೀಡಿದ್ದರು. ಭಾರತ್ ಜೋಡೋ ಯಾತ್ರೆಯಲ್ಲಿ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ, ಮೆಹಬೂಬ ಮುಫ್ತಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಮಾಹಿತಿಯನ್ನು ತಿಳಸಿದ್ದರು.
ಭಾರತ್ ಜೋಡೋ ಯಾತ್ರೆ ಆರಂಭವಾದಾಗಿನಿಂದ ದೊಡ್ಡ ದೊಡ್ಡ ವ್ಯಕ್ತಿಗಳು ಈ ಯಾತ್ರೆಗೆ ಬೆಂಬಲ ಸೂಚಿಸುತ್ತಿದ್ದಾರೆ. ಕನ್ಯಾಕುಮಾರಿಯಿಂದ ಆರಂಭವಾಗಿರುವ ಈ ಯಾತ್ರೆ ಜಮ್ಮು ಕಾಶ್ಮೀರದಲ್ಲಿ ಮುಗಿಯಲಿದೆ. ಒಂಭತ್ತು ದಿನಗಳಿಂದ ನಿಂತಿದ್ದ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಿದೆ.