ಜನವರಿ 05 ರಂದು ಚಿತ್ರದುರ್ಗಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಆಗಮನ

suddionenews
2 Min Read

 

ವರದಿ ಮತ್ತು ಫೋಟೋ ಕೃಪೆ
                       ಸುರೇಶ್ ಪಟ್ಟಣ್,                         
ಮೊ : 87220 22817

ಚಿತ್ರದುರ್ಗ (ಜ.04) :  ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾರವರು ಜನವರಿ 5 ರಂದು ಚಿತ್ರದುರ್ಗಕ್ಕೆ ಬೇಟಿ ನೀಡಲಿದ್ದು ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಓಬಿಸಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಎ.ಮುರಳಿ ತಿಳಿಸಿದರು.

ನಗರದಲ್ಲಿಂದು ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು  ಜ. 5 ರಂದು ಮಧ್ಯಾಹ್ನ ಚಿತ್ರದುರ್ಗಕ್ಕೆ ಆಗಮಿಸಿ ಮದಕರಿ ನಾಯಕ, ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಒನಕೆ ಓಬವ್ವ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.

ತದ ನಗರದ ಮುರುಘಾ ಮಠದ ಆವರಣದಲ್ಲಿನ ಅನುಭವ ಮಂಟಪದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇದು ಮುಗಿದ ಮೇಲೆ ಮದಾರ ಚನ್ನಯ್ಯ ಗುರುಪೀಠ, ಸಿರಿಗೆರೆ ಮಠ ಮತ್ತಿ ಸಿದ್ದರಾಮೇಶ್ವರ ಮಠಕ್ಕೆ ಬೇಟಿ ನೀಡಲಿದ್ದಾರೆ, ನಂತರ ದಾವಣಗೆರೆಯ ಜಿ.ಎಂ.ಐ.ಟಿಯಲ್ಲಿ ನಾಲ್ಕು ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ಜನವರಿ 2 ರಿಂದ ಬೂತ್ ವಿಜಯ ಕಾರ್ಯಕ್ರಮ ಮತಗಟ್ಟೆಯಲ್ಲಿ ಪ್ರಾರಂಭವಾಗಿದೆ. ಇದು ಜ.12ರವರೆಗೆ ನಡೆಯಲಿದೆ. ಚಿತ್ರದುರ್ಗ ಜಿಲ್ಲೆಯ ಎಲ್ಲಾ ಶಾಸಕರು ಕಾರ್ಯಕ್ರಮವನ್ನು ಪ್ರಾರಂಭ ಮಾಡಿದ್ದಾರೆ ಸಂಸದರು ಹೊಸದುರ್ಗದ ವಾರ್ಡ ನಂ. 23ರಲ್ಲಿ ಕಾರ್ಯಕ್ರಮವನ್ನು ಮಾಡಿದ್ದಾರೆ. ಇದರೊಂದಿಎಗ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಪ್ರಮುಖರನ್ನು ನೇಮಕ ಮಾಡಲಾಗುವುದು ಇದರಿಂದ ಪ್ರಧಾನ ಮಂತ್ರಿಗಳ ಮನಕೀ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಲು ಅನುಕೂಲವಾಗಲಿದೆ.

ಇದೇ ಸಮಯದಲ್ಲಿ ಪ್ರತಿ ಗ್ರಾಮದಲ್ಲಿಯೂ 25 ಮನೆಗಳ ಮೇಲೆ ಪಕ್ಷದ ಧ್ವಜವನ್ನು ಹಾರಿಸುವ ಕಾರ್ಯಕ್ರಮ ಇದೆ. ಸಮಾವೇಶದಲ್ಲಿ ಪಕ್ಷ ರಾಜ್ಯಾಧ್ಯಕ್ಷರಾದ ನಳಿನಕುಮಾರ್ ಕಟೀಲ್, ಜಿಲ್ಲೆಯ ಸಂಸದರು ಶಾಸಕರು ಭಾಗವಹಿಸಲಿದ್ದಾರೆ ಎಂದರು.

ಗೋಷ್ಟಿಯಲ್ಲಿ ಕೇಂದ್ರ ಸಚಿವರಾದ ಎ.ನಾರಾಯಣಸ್ವಾಮಿ, ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ನಗರಾಭೀವೃದ್ದಿ ಪ್ರಾಧಿಕಾರದ ಅದ್ಯಕ್ಷರಾದ ಸುರೇಶ್, ಮುಖಂಡರಾದ ಜಯಪಾಲಯ್ಯ, ಸಿದ್ಧೇಶ್ ಯಾದವ್, ಸಿದಾರ್ಥ ಗೂಡಾರ್ಪಿ, ಸಂಪತ್ ಗೌರಣ್ಣ, ಮಲ್ಲಿಕಾರ್ಜನ್, ರಾಜೇಶ್, ನರೇಂದ್ರ, ವಕ್ತಾರರಾದ ದಗ್ಗೆ ಶಿವಪ್ರಕಾಶ್ ನಾಗರಾಜ್ ಬೇದ್ರೇ ಸೇರಿದಂತೆ ಇತರರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *