ಚಿತ್ರದುರ್ಗ: ವರ್ಷದಿಂದಾನು ಸಚಿವ ಸಂಪುಟ ವಿಸ್ತರಣೆಯಾಗಬೇಕೆಂದು ಹಲವರು ಪಟ್ಟು ಹಿಡಿದಿದ್ದಾರೆ. ಆದರೆ ಹೈಕಮಾಂಡ್ ನಿಂದ ಯಾವುದೇ ರೆಸ್ಪಾನ್ಸ್ ಇರಲಿಲ್ಲ. ಇದೀಗ ಮತ್ತೆ ಸಚಿವ ಸಂಪುಟದ ವಿಚಾರ ಮುನ್ನೆಲೆಗೆ ಬಂದಿದೆ. ಗುಜರಾತ್ ಗೆಲುವಿನ ನಂತರ ಬಿಜೆಪಿ ಚಿತ್ತ ಕರ್ನಾಟಕದತ್ತ ನೆಟ್ಟಿದೆ.
ಅದರಲ್ಲೂ ಮೂರು ತಿಂಗಳಾದರೂ ಸರಿ ನಾವೂ ಸಚಿವರಾಗಲೇಬೇಕೆಂದು ಹಠ ತೊಟ್ಟಿದ್ದಾರೆ. ಅದರಲ್ಲೂ ಸಿಡಿ ಕೇಸ್ ನಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ರಮೇಶ್ ಜಾರಕಿಹೊಳಿ ಹಾಗೂ ಗುತ್ತಿಗೆದಾರನ ಆತ್ಮಹತ್ಯೆಯಿಂದ ರಾಜೀನಾಮೆ ನೀಡಿದ್ದ ಈಶ್ವರಪ್ಪ. ಈ ಇಬ್ಬರು ಮತ್ತೆ ಸಚಿವರಾಗಲೇಬೇಕೆಂದು ಹರಸಾಹಸ ಪಡುತ್ತಿದ್ದಾರೆ. ಈ ಬಾರಿಯ ಚಳಿಗಾಲದ ಅಧಿವೇಶನಕ್ಕೂ ಮೊದಲ ದಿನ ಹಾಜರಾಗಿರಲಿಲ್ಲ. ಆದರೆ ಬಳಿಕ ಸಿಎಂ ಮಾತುಕತೆಯ ನಂತರ ಎಲ್ಲವೂ ಸರಿಯಾಗಿತ್ತು. ಇನ್ನು ರಮೇಶ್ ಜಾರಕಿಹೊಳಿ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿ ಬಂದರು. ಆದರೂ ಪ್ರಯೋಜನವೇನು ಆದಂತೆ ಕಾಣುತ್ತಿಲ್ಲ.
ಇದೀಗ ಈ ಬಗ್ಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಬಳಿ ಚರ್ಚಿಸಿದ್ದೇನೆ. ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆಯಾಗುತ್ತೆ. ರಮೇಶ್ ಜಾರಕಿಹೊಳಿ ಹಾಗೂ ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ನೀಡುವುದು, ಬಿಡುವುದು ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.